ವೀರ ಸಾವರ್ಕರ್ ಅವಹೇಳನ ಖಂಡಿಸಿ ಕಾರ್ಕಳದಲ್ಲಿ ಹಿಂದೂ ಸಂಘಟನೆಗಳಿಂದ ಮಾನವ ಸರಪಳಿ ಅಭಿಯಾನ

ಕಾರ್ಕಳ: ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರನ್ನು ರಾಜಕೀಯ ವ್ಯಕ್ತಿಗಳು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಂಡು ಅವಹೇಳನ ಮಾಡುತ್ತಿರುವುದು ಖಂಡನೀಯ ಎಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸದಸ್ಯ ರಮೇಶ್ ಕಲ್ಲೊಟ್ಟೆ ಹೇಳಿದರು. ಕಾರ್ಕಳದ ಹಿಂದೂ ಜಾಗಣ ವೇದಿಕೆ ಹಾಗೂ ಹಿಂದೂ ಯುವ ವಾಹಿನಿ ವತಿಯಿಂದ ಕಾರ್ಕಳ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ಸಾವರ್ಕರ್ ಅವಹೇಳನ ಮಾಡಿದ ಸಿದ್ದರಾಮಯ್ಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ರಮೇಶ್ ಕಲ್ಲೊಟ್ಟೆ, ನಮಗೆ ಸ್ವಾತಂತ್ರ್ಯ ಕೇವಲ ಶಾಂತಿಯಿಂದ ಸಿಕ್ಕಿಲ್ಲ […]
ಜ್ಞಾನ ಸುಧಾ ಕಾಲೇಜಿನ ವಿದ್ಯಾರ್ಥಿನಿ ಚೆಸ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಜ್ಞಾನಸುಧಾ ಪ.ಪೂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕು. ಅರುಂದತಿ.ಜಿ.ವಿ ಇವರು ಶ್ರೀ ಮೂಕಾಂಬಿಕ ದೇವಳ ಸ್ವತಂತ್ರ ಪ.ಪೂ. ಕಾಲೇಜು ಕೊಲ್ಲೂರಿನಲ್ಲಿ ನಡೆದ ಪದವಿ ಪೂರ್ವ ವಿಭಾಗದ ಉಡುಪಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ 5ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಶ್ರೀ ಗಣೇಶ್ ವಿ.ಜಿ ಮತ್ತು ಶ್ರೀಮತಿ ವೀಣಾ ದಂಪತಿಗಳ ಪುತ್ರಿ. ರಾಜ್ಯಮಟ್ಟಕ್ಕೆ ಆಯ್ಕೆಗೊಂಡ ವಿದ್ಯಾರ್ಥಿನಿಗೆ ಜ್ಞಾನಸುಧಾ ಪರಿವಾರ ಶುಭಕೋರಿದೆ.
ಹಿರ್ಗಾನ: ಆಗಸ್ಟ್ 20 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ

ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಆಗಸ್ಟ್ 20 ರಂದು ಕಾರ್ಕಳ ತಾಲೂಕು ಅಜೆಕಾರು ಹೋಬಳಿಯ ಹಿರ್ಗಾನ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾ ಭವನದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಹಿರ್ಗಾನ ಗ್ರಾಮದ ಗ್ರಾಮಸ್ಥರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಕಳ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆಪ್ಟಂಬರ್ 3 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟಂಬರ್ 3 ರಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ, ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಸ್ಪರ್ಧೆಗಳ ವಿವರ: ಪುರುಷರಿಗೆ: 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ ಓಟ, ಉದ್ದ ಜಿಗಿತ, ಎತ್ತರಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110ಮೀ ಹರ್ಡಲ್ಸ್, 4*100ಮೀ ರಿಲೇ, 4*400ಮೀ […]
ದೇಶಕ್ಕಾಗಿ ಹೋರಾಡಿದ ಸ್ಥಳೀಯ ನಾಯಕರನ್ನು ಗುರುತಿಸಿ ಗೌರವಿಸಿ: ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ

ಕಾರ್ಕಳ: ಸ್ವಾತಂತ್ರ್ಯ ಹೋರಾಟಕ್ಕೆ ದುಡಿದು ಮಡಿದ ಸ್ಥಳೀಯ ಮಹಾತ್ಮರನ್ನು ಸ್ಮರಿಸುವುದು ನಮ್ಮ ಆದ್ಯತೆಯಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಸೈನಿಕ ಸಂಘದ ಉಪಾಧ್ಯಕ್ಷ, ಭಾರತೀಯ ವಾಯು ಸೇನೆಯ ಮಾಜಿ ಸೈನಿಕ ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ.ಬಿ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ 76ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಗೈದು ಮಾತನಾಡಿದರು. ನಮ್ಮ ಸುತ್ತ ಮುತ್ತಲು ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ಗುರುತಿಸಿ ಗೌರವಿಸುವ ಕಾರ್ಯವಾಗಬೇಕು. ಅನೇಕ ಮಹನೀಯರ ಸಾಹಸಗಳನ್ನು ಸಾದರ ಪಡಿಸುತ್ತಾ, ದೇಶದ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಹುಮ್ಮಸ್ಸನ್ನು […]