ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕ್ರಿಯೇಟಿವ್ ಕಾಲೇಜಿಗೆ ಪ್ರಥಮ ಸ್ಥಾನ

ಕಾರ್ಕಳ: 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ ಭಟ್ ಪ್ರಥಮ ಸ್ಥಾನ ಗಳಿಸಿದ್ದಾರೆ. ‘ಆಜಾದಿ ಕಾ ಅಮೃತ್ ಮಹೋತ್ಸವ್’ ನ ಸುಸಂದರ್ಭದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಮಲ್ಪೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 03 ರಂದು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವಿಜೇತ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ […]
ಮೂಡಬಿದ್ರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮೂಡಬಿದ್ರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಮೂಡುಬಿದ್ರೆ ಸಮೀಪದ ಬನ್ನಡ್ಕದ ರಾಘವೇಂದ್ರ ಮಠದ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಮಂಗಳೂರು-ಮೂಡಬಿದ್ರೆ ಮಾರ್ಗವಾಗಿ ಕಾರ್ಕಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸು ಬನ್ನಡ್ಕದ ರಾಘವೇಂದ್ರ ಮಠದ ಬಳಿ ಬಂದಾಗ ಕೆಳಗೆ ಉರುಳಿ ಬಿದ್ದು ಅಫಘಾತಕ್ಕೀಡಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಮೂಡಬಿದ್ರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜ್ಞಾನಸುಧಾ ಕಾಲೇಜು: ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳ ಉದ್ಘಾಟನೆ

ಕಾರ್ಕಳ: ವಿದ್ಯಾರ್ಥಿಗಳು ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಮತ್ತು ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಅರಿವು ಮೂಡಲು ಎನ್ನೆಸ್ಸೆಸ್ ತನ್ನದೇ ಆದ ರೀತಿಯಲ್ಲಿ ಸಹಕಾರಿಯಾಗಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿಯ ಪ್ರಾಂಶುಪಾಲರಾದ ಡಾ. ಪ್ರಸಾದ್ ರಾವ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟಕರಾಗಿ ಭಾಗವಹಿಸಿ ಮಾತನಾಡುತ್ತಾ ನಾನು ನನ್ನದು ಎಂಬ ಸ್ವಾರ್ಥಪರತೆಯ ಮನೋಭಾವ ಎಲ್ಲೆಡೆ ಮನೆಮಾಡಿರುವಾಗ ಶೈಕ್ಷಣಿಕ ಜೀವನದ ಎನ್ನೆಸ್ಸೆಸ್ ಸಹಬಾಳ್ವೆ, ‘ನನಗಲ್ಲ ನಿನಗೆ’ ಎಂಬ ಕಲ್ಪನೆ ಕೊಟ್ಟು ಶ್ರಮದ […]
ಕೆಸಿಇಟಿ ಇಂಜಿನಿಯರಿಂಗ್ ನಲ್ಲಿ ಜ್ಞಾನಸುಧಾದ ಸ್ತುತಿಗೆ 40ನೇ ರ‍್ಯಾಂಕ್; ಜಿಲ್ಲೆಗೆ ಪ್ರಥಮ ಸ್ಥಾನ

ಕಾರ್ಕಳ : ಕೆಸಿಇಟಿ ಇಂಜಿನಿಯರಿಂಗ್ 2022ರ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಕು. ಸ್ತುತಿ ಎಸ್, ಕೆಸಿಇಟಿ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 40ನೇ ರ‍್ಯಾಂಕ್ ಗಳಿಸಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿರುತ್ತಾರೆ. ಈ ವರ್ಷ ರಾಜ್ಯದಲ್ಲಿ ಒಟ್ಟು 2,10,829 ವಿದ್ಯಾರ್ಥಿಗಳು ಕೆಸಿಇಟಿ ಪರೀಕ್ಷೆ ಬರೆದಿದ್ದು, ಇದರಲ್ಲಿಇವಳ ಸಾಧನೆಯು ಶ್ಲಾಘನೀಯ ಸಂಗತಿಯಾಗಿದೆ. ಈಕೆಯು ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಐದು ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳಿಸಿ, 593 ಅಂಕಗಳೊಂದಿಗೆ ರಾಜ್ಯಕ್ಕೆ 6 ನೇ ರ‍್ಯಾಂಕ್, ಕಾಮೆಡ್-ಕೆ […]
ಸಿ.ಇ.ಟಿ ಫಲಿತಾಂಶ: ಪ್ರಥಮ ವರ್ಷದಲ್ಲಿಯೇ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ಅಮೋಘ ಸಾಧನೆ

ಕಾರ್ಕಳ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ -2022 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಜ್ಯದ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆಗಳಿಸಿದ್ದಾರೆ. ರಾಜ್ಯದ ಕೃಷಿ ವಿಶ್ವ ವಿದ್ಯಾನಿಲಯಗಳಿಗೆ ನಡೆಸುವ ಪ್ರಾಯೋಗಿಕ ಪರೀಕ್ಷೆಯಲ್ಲಿ ಉಪಾಸನ ಬಿ ಪಿ ರಾಜ್ಯಕ್ಕೆ 42 ನೇ ರ‍್ಯಾಂಕ್ ಹಾಗೂ ಪಶುವೈದ್ಯಕೀಯ ಪ್ರಾಯೋಗಿಕ ಪರೀಕ್ಷೆಯಲ್ಲಿ 103 ನೇ ರ‍್ಯಾಂಕ್ ಗಳಿಸಿರುತ್ತಾರೆ ಮತ್ತು ಮಧುಶ್ರೀ.ವಿ […]