ಕಾರ್ಕಳ: ಸಮಾಜ ಸೇವಕ, ಧಾರ್ಮಿಕ ಮುಖಂಡ ಜಯರಾಮ್ ನಾಯಕ್ ನಿಧನ

ಕಾರ್ಕಳ: ಬೈಲಗಂಡಿಯ ಸಮಾಜ ಸೇವಕ ಮತ್ತು ಧಾರ್ಮಿಕ ಮುಖಂಡ ಜಯರಾಮ್ ನಾಯಕ್ (63 ವರ್ಷ) ಇಂದು ಮುಂಜಾನೆ ಕಾರ್ಕಳದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಪತ್ನಿ, ಮಗಳು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ. ಕಾರ್ಪೊರೇಷನ್ ಬ್ಯಾಂಕಿನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಇವರು, ದೊಂಡೇರಂಗಡಿ ಶ್ರೀ ರಾಮ ಮಂದಿರದ ಅಧ್ಯಕ್ಷರಾಗಿದ್ದರು. 3 ವರ್ಷಗಳ ಹಿಂದೆ ನಡೆದ ಮಂದಿರದ ಜೀರ್ಣೋದ್ಧಾರ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮುನಿಯಾಲು ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಕಾರ್ಕಳ ಶ್ರೀ […]
ದೈವಸ್ಥಾನಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಸಚಿವರಿಗೆ ಮನವಿ

ಕಾರ್ಕಳ: ಯರ್ಲಪಾಡಿ ಗ್ರಾಮ ಪಂಚಾಯತ್ ವತಿಯಿಂದ, ಯರ್ಲಪಾಡಿ ಗ್ರಾಮದ ಜಾರ್ಕಳ, ನೂಜಿಗುಡ್ಡೆ, ಬಾವದಕರೆ ಬ್ರಹ್ಮಮುಗೇರ ದೈವಸ್ಥಾನಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ವಿಶೇಷ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಯರ್ಲಪಾಡಿ, ಯರ್ಲಪಾಡಿ ಬಿಜೆಪಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ಮುಸ್ತಾಫ್ ಜಾರ್ಕಳ ಉಪಸ್ಥಿತರಿದ್ದರು.
ಮಂಗಳೂರಿನ ಸಮೀಪ ಅಂತಾರಾಷ್ಟ್ರೀಯ ಮಟ್ಟದ ಫರ್ನೀಚರ್ ಕ್ಲಸ್ಟರ್ ಪ್ರಾರಂಭಿಸಲು ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ: ಯುವಕರಿಗೆ ಉದ್ಯೋಗ ಒದಗಿಸುವಂತಹ ಅಂತಾರಾಷ್ಟ್ರೀಯ ಮಟ್ಟದ ಫರ್ನೀಚರ್ ಕ್ಲಸ್ಟರನ್ನು ಮಂಗಳೂರು ಸಮೀಪದಲ್ಲಿ ಇದೇ ವರ್ಷ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಬುಧವಾರ ಕಾರ್ಕಳ ತಾಲ್ಲೂಕಿನ ಎಣ್ಣೆಹೊಳೆ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಕರಾವಳಿ ಪ್ರದೇಶದಲ್ಲಿ ಗ್ರೀನ್ ಪವರ್ ಅಭಿವೃದ್ಧಿ, ಹಸಿರು ಇಂಧನ ಆಧಾರಿತ ಕೈಗಾರಿಕಾ ಹಬ್ ನಿರ್ಮಿಸಲು ತೀರ್ಮಾನ ಮಾಡಲಾಗಿದೆ. ಶಿಲ್ಪಿಗಳು, ಮರದ ಕೆಲಸ ಮಾಡುವವರಿಗಾಗಿ ಕ್ಲಸ್ಟರನ್ನು ಸ್ಥಾಪಿಸಲು ಶೀಘ್ರದಲ್ಲಿಯೇ ಅನುಮೋದನೆ ನೀಡಲಾಗುವುದು. ಈ ರೀತಿ ಸರ್ಕಾರ ಸಮಗ್ರ, […]
ಕಾರ್ಕಳ: ಹೆಬ್ರಿ ತಾಲೂಕು ನೂತನ ಆಡಳಿತ ಸೌಧ ಕಟ್ಟಡ ಲೋಕಾರ್ಪಣೆ

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನೂತನ ಆಡಳಿತ ಸೌಧ ಕಟ್ಟಡವನ್ನು ಬುಧವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ತದನಂತರ ಹೆಬ್ರಿಯ ಸುಸಜ್ಜಿತ ಬಸ್ ನಿಲ್ದಾಣ ಕಾಮಗಾರಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್ , ನೀರಾವರಿ ಸಚಿವ ಗೋವಿಂದ ಕಾರಜೋಳ , ಇಂಧನ ಸಚಿವ ಸುನಿಲ್ ಕುಮಾರ್ , ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಸಚಿವ […]
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಎಣ್ಣೆಹೊಳೆ ಏತ ನೀರಾವರಿ ಯೋಜನೆ ಉದ್ಘಾಟನೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಎಣ್ಣೆಹೊಳೆ ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಉದ್ಘಾಟಿಸಿದರು. ಎಣ್ಣೆಹೊಳೆ ಏತ ನೀರಾವರಿ ಯೋಜನಾ ಸ್ಥಳದಲ್ಲಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್ ಅಶೋಕ್, ಇಂಧನ ಸಚಿವ ಸುನಿಲ್ ಕುಮಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಸಚಿವ ಎಸ್ ಅಂಗಾರ, ಶಾಸಕರಾದ ರಘುಪತಿ ಭಟ್, ಲಾಲಾಜಿ […]