ಮೇ 31-ಜೂನ್ 01: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಮೇ 31 ಹಾಗೂ ಜೂನ್ 01 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಮೇ 31 ರಂದು ರಾತ್ರಿ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದಾರೆ. ಜೂನ್ 01 ರಂದು ಬೆಳಗ್ಗೆ 10:30 ಕ್ಕೆ ಕಾರ್ಕಳ ತಾಲ್ಲೂಕಿನ ಎಣ್ಣೆಹೊಳೆ ಏತ ನೀರಾವರಿ ಯೋಜನೆ ಉದ್ಘಾಟಿಸಿ, ಮಧ್ಯಾಹ್ನ 12 ಗಂಟೆಗೆ ಹೆಬ್ರಿ ತಾಲ್ಲೂಕಿನಲ್ಲಿ ತಾಲ್ಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಗಳ ನಿರ್ಮಾಣ ಮತ್ತು […]
ಮೇ 29 ರಂದು ಬೈಲೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಕಾರ್ಕಳ: ಹಿಂದೂ ಜಾಗರಣ ವೇದಿಕೆ ಬೈಲೂರು ವಲಯ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್(ರಿ.), ಉಡುಪಿ, ರಕ್ತನಿಧಿ, ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ ಇವರ ಸಹಯೋಗದೊಂದಿಗೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಮೇ 29 ರವಿವಾರದಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರವರೆಗೆ ಬೈಲೂರಿನ ಸರಕಾರಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ದಾನಿಗಳು ಸ್ವಯಂ ಪ್ರೇರಣೆಯಿಂದ ರಕ್ತ ದಾನ ಮಾಡಿ ಜೀವ ಉಳಿಸಬೇಕಾಗಿ ಕೇಳಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸುರೇಶ್ ಸಾಲ್ಯಾನ್-9449281268, ದೀಪಕ್-7022918175, ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್-9986668476 ಮಾಣಿಪಾಲ್ ಇವರನ್ನು ಸಂಪರ್ಕಿಸಲು ಕೋರಲಾಗಿದೆ.
ಕ್ರಿಯೇಟಿವ್ ಕಾಲೇಜಿನ ಮತ್ತೊಂದು ಹೊಸ ಹೆಜ್ಜೆ- ಉಡುಪಿಯಲ್ಲಿ ಕ್ರಿಯೇಟಿವ್ ಸಂಸ್ಥೆಯ ಕಾಲೇಜು ಪ್ರಾರಂಭ

-ಗುಣಮಟ್ಟದ ಶಿಕ್ಷಣ, ಹೈಟೆಕ್ ಸೌಲಭ್ಯದ ಸಂಸ್ಥೆ – ಕಡಿಮೆ ಶುಲ್ಕದಲ್ಲಿ ಅತ್ಯುತ್ತಮ ಶಿಕ್ಷಣ, ತರಬೇತಿ – ಕರಾವಳಿಯ ಅತೀ ಹೆಚ್ಚು ಬೇಡಿಕೆಯ ಕಾಲೇಜು ಉಡುಪಿ: ಗುಣಮಟ್ಟದ ಶಿಕ್ಷಣಕ್ಕೆ ಕರಾವಳಿಯು ಹೆಸರುವಾಸಿಯಾಗಿದೆ. ಹತ್ತಾರು ಕಾಲೇಜುಗಳು ಲಕ್ಷ ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸಿ ಹೊಸ ಬದುಕನ್ನು ನೀಡಿವೆ. ಅಂತಹ ಶಿಕ್ಷಣ ಸಂಸ್ಥೆಗಳ ಸಾಲಿಗೆ ಇದೀಗ ಕಾರ್ಕಳದ ಕ್ರಿಯೇಟಿವ್ ಕಾಲೇಜು ಸೇರಿದೆ. ಕರಾವಳಿಯ ಬಹುತೇಕ ಟಾಪ್ ಕಾಲೇಜುಗಳಲ್ಲಿ ಹತ್ತಾರು ವರ್ಷ ಬೋಧನೆ ಮಾಡಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಉತ್ಸಾಹಿ, […]
ಸಾಣೂರು ಗ್ರಾಮದಲ್ಲಿ ಬೆಂಕಿ ಆಕಸ್ಮಿಕ; ಗಾಯಾಳು ವೃದ್ಧೆ ಸಾವು

ಕಾರ್ಕಳ: ಒಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸಾಣೂರು ಗ್ರಾಮದ ನಿವಾಸಿ 71 ವರ್ಷದ ಸುಮತಿ ಶೆಟ್ಟಿ ಮೃತ ದುರ್ದೈವಿ. ಇವರು ಏ.4ರಂದು ಬೆಳಿಗ್ಗೆ ಅಡುಗೆ ಮನೆಯಲ್ಲಿ ಕಟ್ಟಿಗೆ ಓಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಆಕಸ್ಮಿಕವಾಗಿ ಸೀರೆಯ ಸೆರಗಿಗೆ ಬೆಂಕಿ ತಗಲಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡವರನ್ನು ಆಳ್ವಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ […]
ಕಾರ್ಕಳ: ರಿಕ್ಷಾ ಚಾಲಕರಿಂದ ಬಟ್ಟೆ ಅಂಗಡಿ ಸಿಬ್ಬಂದಿ ಮೇಲೆ ಹಲ್ಲೆ

ಕಾರ್ಕಳ: ರಿಕ್ಷಾ ಬಾಡಿಗೆ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರ ಮೇಲೆ ರಿಕ್ಷಾ ಚಾಲಕರು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಕುಕ್ಕುಂದೂರು ಯೋಗೀಶ ನಾಯಕ್ ಕಾರ್ಕಳ ಜೋಡು ರಸ್ತೆಯಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಎ.29 ರಂದು ತಮ್ಮ ಅಂಗಡಿಯ ಮಾಲೀಕರ ಮತ್ತೊಂದು ಅಂಗಡಿಯ ಕೆಲಸಗಾರರಿಗೆ ತಿಂಡಿ ಕೊಡಲು ಹೋಗುತ್ತಿರುವಾಗ ಆಪಾದಿತ ರಿಕ್ಷಾಚಾಲಕ ಪದ್ಮನಾಭ ಶೆಟ್ಟಿಗಾರ್, ಮನೋಜ್ ಮತ್ತು ಪ್ಯಾಸ್ಕಲ್ ಎಂಬುವರು ಯೋಗೀಶ್ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಮಾತ್ರವಲ್ಲದೆ ತಮಗೆ ರಿಕ್ಷಾ ಬಾಡಿಗೆ […]