ತ್ರಿಶಾ ಕಾಲೇಜು ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕಕ್ಕೆ ಭೇಟಿ

ಕಟಪಾಡಿ: ಮೇ 31ರಂದು ತೃತೀಯ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ಕಾರ್ಕಳದಲ್ಲಿರುವ ಬೋಳಾಸ್ ಆಗ್ರೋ ಪ್ರೈ. ಲಿಗೆ ಕೈಗಾರಿಕಾ ಭೇಟಿಯನ್ನು ಹಮ್ಮಿಕೊಳ್ಳಲಾಗಿದ್ದು ವಿದ್ಯಾರ್ಥಿಗಳು ಪ್ರಾಯೋಗಿಕ ಜ್ಞಾನವನ್ನು ಪಡೆದುಕೊಂಡರು. ಜೊತೆಗೆ ಬ್ರಹ್ಮಾವರದ ಅನಾಥಾಶ್ರಮಕ್ಕೆ ಭೇಟಿ ಕೊಟ್ಟು ವಿದ್ಯಾರ್ಥಿಗಳು ಸಂಬಂಧಗಳ ಬೆಲೆಯನ್ನು ತಿಳಿದುಕೊಳ್ಳುವಂತೆ ಮಾಡಲಾಯಿತು. ಕಾರ್ಯಕ್ರಮದಲ್ಲಿ 120ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು ತಮ್ಮ ಕೈಗಾರಿಕಾ ಭೇಟಿ ಹಾಗೂ ವೃದ್ಧಾಶ್ರಮದ ಭೇಟಿಯ ಅನುಭವದ ವರದಿಯನ್ನು ಕಾಲೇಜಿಗೆ ಸಲ್ಲಿಸಿದರು ತ್ರಿಶಾ ವಿದ್ಯಾ ಕಾಲೇಜಿನ ಪ್ರಾಧ್ಯಾಪಕರು ಜೊತೆಗೂಡಿದರು.
ಜ್ಞಾನಸುಧಾ ಶ್ರೀ ಮಹಾಗಣಪತಿ ದೇವಸ್ಥಾನದ ಹತ್ತನೇ ಪ್ರತಿಷ್ಠಾ ಮಹೋತ್ಸವದ ಸಂಭ್ರಮ: 38 ಲಕ್ಷ ರೂ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ: ದಿವ್ಯವಾದ ಸನ್ನಿಧಾನದಿಂದ ಯಶಸ್ವಿಯಾಗಬಹುದು. ಸಾಧನೆ ಮಾಡುತ್ತಾ ಎತ್ತರಕ್ಕೆ ಏರಬಹುದು. ಇತರ ಪ್ರಾಣಿಗಳಿಗೆ ಬುದ್ದಿಶಕ್ತಿ ಸೀಮಿತವಾಗಿದ್ದರೆ, ಭಗವಂತನು ಮನುಷ್ಯನಿಗೆ ಕೊಟ್ಟ ಅಸಾಧಾರಣ ಶಕ್ತಿಯೆಂದರೆ ಕ್ರೀಯಾಶೀಲವಾಗಿರುವ ಕೈಬೆರಳುಗಳು ಮತ್ತು ಅಪೂರ್ವವಾಗಿರುವ ಬುದ್ದಿ ಶಕ್ತಿ. ವಿದ್ಯೆಯ ಜೊತೆಗೆ ಬುದ್ದಿ ಇದ್ದರೆ ಪ್ರಪಂಚಕ್ಕೆ ಪೂರಕವಾಗುತ್ತದೆ. ಬೌದ್ಧಿಕ ಶಕ್ತಿಯನ್ನು, ಮನಶಕ್ತಿಯನ್ನು ಸತ್ಕರ್ಮದಿಂದ ಸದ್ವಿನಿಯೋಗ ಮಾಡಿದಾಗ ಶ್ರೇಷ್ಠವಾಗಿರುವುದನ್ನು ಪ್ರಪಂಚಕ್ಕೆ ನೀಡಬಹುದು ಎಂದು ಕುಕ್ಕೆ ಸುಬ್ರಹ್ಮಣ್ಯ ಮಠಾಧಿಪತಿ ಶ್ರೀ ವಿದ್ಯಾಪ್ರಸನ್ನ ತೀರ್ಥಸ್ವಾಮಿಜಿ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ […]
ಜೆಇಇ ಮೈನ್ (ಬಿ.ಆರ್ಕ್) ಫಲಿತಾಂಶ: ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ : ರಾಷ್ಟ್ರಮಟ್ಟದಲ್ಲಿಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕಿಟೆಕ್ಚರ್ ಎರಡನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 10 ವಿದ್ಯಾರ್ಥಿಗಳಿಗೆ 90 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ಚಮನ್ ಡಿ.ಪಿ 99.8141321 ಪರ್ಸಂಟೈಲ್, ಶ್ರೀಕಾಂತ್ ಎಚ್ 99.6402022 ಪರ್ಸಂಟೈಲ್, ಸೂರ್ಯ ವಿ 96.6726137 ಪರ್ಸಂಟೈಲ್, ಹರ್ಷಿತ್.ಎಸ್.ಎಸ್ 96.0327859 ಪರ್ಸಂಟೈಲ್, ವಿಶಾಲ್ ಎಂ.ವಿ 94.8139797 ಪರ್ಸಂಟೈಲ್, ಸಾಯಿ ಲಿಖಿತ್ ರೆಡ್ಡಿ […]
ಮುಂಬರುವ ತಾ.ಪಂ ಹಾಗೂ ಜಿ.ಪಂ. ಚುನಾವಣೆಗೆ ಇಂದಿನಿಂದಲೇ ಸಿದ್ದತೆ: ಉದಯ್ ಕುಮಾರ್ ಶೆಟ್ಟಿ

ಕಾರ್ಕಳ: ಮುಂಬರುವ ತಾ.ಪಂ ಹಾಗೂ ಜಿ.ಪಂ. ಚುನಾವಣೆಗೆ ನಾವು ಇಂದಿನಿಂದಲೇ ಸಿದ್ದತೆ ನಡೆಸಬೇಕಿದೆ. ಗೆಲುವಿವಾಗಿ ಪ್ರತಿ ಬೂತ್ ನ ಕಾರ್ಯಕರ್ತರು ಟೀಂ ಆಗಿ ಕಾರ್ಯನಿರ್ವಹಿಸಬೇಕಿದೆ ಎಂದು ಉದಯ ಶೆಟ್ಟಿ ಮುನಿಯಾಲು ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಬಹುಮತ ದೊರೆತ ಹಿನ್ನೆಲೆಯಲ್ಲಿ ಮೇ 22ರಂದು ಕಾರ್ಕಳದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದ ಮತದಾರರು ಸ್ಪಷ್ಟ ಬಹುಮತದೊಂದಿಗೆ ಸುಭದ್ರ ಸರಕಾರ ರಚಿಸುವಲ್ಲಿ ಬೆಂಬಲ ನೀಡಿದ್ದಾರೆ. ಕಾರ್ಕಳದಲ್ಲೂ ಕಾಂಗ್ರೆಸ್ ಗೆಲುವಿಗಾಗಿ ಕಾರ್ಯಕರ್ತರು ರಾತ್ರಿ ಹಗಲೆನ್ನದೆ ದುಡಿದಿದ್ದಾರೆ. ಅವರ ಶ್ರಮ ನಮ್ಮ ಮನಸ್ಸಿನಲ್ಲಿದೆ […]
ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಪರೀಕ್ಷೆ: ಕ್ರಿಯೇಟಿವ್ ಪ.ಪೂ ಕಾಲೇಜಿನ 11 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ: Institute of Company Secretary of India ಮೇ 6 ರಂದು ನಡೆಸಿದ ಅತ್ಯಂತ ಕಠಿಣ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಆರ್ಯ ಅಶೋಕ್, ಅನಘ, ಅನಿರುದ್ಧ್, ದ್ರುವ ಕೆ.ಜಿ, ಅವನೀಶ್ ದೇವಾಡಿಗ, ಓಂಕಾರ್ ಪ್ರಕಾಶ್ ಹೆಗಡೆಯಾಲ್, ಧೃತಿ ಡಿ. ಶೆಟ್ಟಿ, ಕಾನಂಗಿ ಸಮೀಕ್ಷಾ ಹೆಗ್ಡೆ, ಪಾಟೀಲ್ ಶ್ರಾವಣಿ ಅರವಿಂದ್, ವಿಸ್ಮಯ ಹೆಚ್.ಎಸ್ ಮತ್ತು ಧೃತಿ ಆರ್.ಎನ್ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಒಟ್ಟು 14 […]