ಕಾರ್ಕಳ: ಕಾಡಿನ ಮಧ್ಯೆ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಕಾರ್ಕಳ: ಕಾಡಿನ ಮಧ್ಯೆ ವ್ಯಕ್ತಿಯೊಬ್ಬರು ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ಬೋಳ ಗ್ರಾಮದ ನಡಿಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಕಾರ್ಕಳ ಮಾಳ ಹುಕ್ರಟ್ಟೆ ನಿವಾಸಿ ಪ್ರಭಾಕರ ಪೂಜಾರಿ (50) ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಮಕ್ಕಳೇ ಕ್ಷಮಿಸಿ ಎಂದು ಬರೆಯಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.