ಕಾರ್ಕಳ: ಪರಶುರಾಮ ಥೀಮ್‌ ಪಾರ್ಕ್‌ ವಿವಾದಕ್ಕೆ ಹೈಕೋರ್ಟ್ ನಿಂದ ಮಧ್ಯಾಂತರ ತಡೆ; ವಿಚಾರಣೆ ಸೆ.10ಕ್ಕೆ ಮುಂದೂಡಿಕೆ.

ಬೆಂಗಳೂರು: ‘ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ಎಸಗಿದ್ದಾರೆ’ ಎಂದು ಆರೋಪಿಸಿ ಶಿಲ್ಪ ಕಲಾವಿದ ಹಾಗೂ ‘ಕ್ರಿಷ್ ಆರ್ಟ್ ವರ್ಲ್ಡ್’ ಮುಖ್ಯಸ್ಥ ಕೃಷ್ಣ ನಾಯಕ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.’ನನ್ನ ವಿರುದ್ಧ ಕಾರ್ಕಳ ಟೌನ್ ಪೊಲೀಸರು ದಾಖಲಿಸಿರುವ ಎಫ್‌ಐಆ‌ರ್ ಹಾಗೂ ಕಾರ್ಕಳ ಜೆಎಂಎಫ್‌ಸಿ ನ್ಯಾಯಾಲಯದಲ್ಲಿನ ನ್ಯಾಯಿಕ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಬೆಂಗಳೂರಿನ ವಿಶ್ವೇಶ್ವರಯ್ಯ ಲೇ ಔಟ್ ನಿವಾಸಿಯಾದ ಕೃಷ್ಣ […]