ಕಾರ್ಕಳ: ಅಂಧ, ಮಾನಸಿಕ ಅಸ್ವಸ್ಥ ಯುವಕನಿಗೆ ಆಶ್ರಯ ನೀಡಿದ ಹೊಸಬೆಳಕು ಆಶ್ರಮ.

ಕಾರ್ಕಳ: ಅಂಧ ಹಾಗೂ ಮಾನಸಿಕ ಅಸ್ವಸ್ಥ ಯುವಕನಿಗೆ ಕಾರ್ಕಳ ಬೈಲೂರಿನ ರಂಗನಪಲ್ಕೆಯ ಹೊಸಬೆಳಕು ಆಶ್ರಮ ಆಶ್ರಯ ನೀಡಿ ಮಾನವೀಯತೆ ಮೆರೆದಿದೆ. ಯುವಕ ರಾಜೇಶ್ (27) ಹೊರ ರಾಜ್ಯದವನಾಗಿದ್ದು, ದೃಷ್ಟಿ ಹೀನನಾಗಿದ್ದು ಅಲ್ಲದೆ ಮಾನಸಿನ ಅಸ್ವಸ್ಥತೆಗೆ ಜಾರಿದ್ದ. ಈತ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದ. ಸಂಬಂಧಿಕರು ಪತ್ತೆಯಾಗದ ಕಾರಣ ಯುವಕ ಬೀದಿ ಪಾಲಾಗಿ ಬದುಕು ಸಂಕಷ್ಟಕ್ಕೀಡಾಗಲಿದೆ ಎಂದು ಅರಿತ ಸಮಾಜ ಸೇವಕ ವಿಶು ಶೆಟ್ಟಿ ಅವರು, ಹೊಸಬೆಳಕು ಆಶ್ರಮದ ಮುಖ್ಯಸ್ಥೆ ತನುಲಾ ಅವರನ್ನು ಸಂಪರ್ಕಿಸಿ, ಯುವಕನಿಗೆ ಆಶ್ರಯ […]