ಜ್ವರ, ಉಸಿರಾಟದ ಸಮಸ್ಯೆಯಿಂದ ಕಾರ್ಕಳದ ಮಿಯಾರುನಲ್ಲಿ ಹತ್ತು ತಿಂಗಳ ಮಗು ಸಾವು

ಉಡುಪಿ: ಕಾರ್ಕಳ ತಾಲ್ಲೂಕಿನ ಮಿಯಾರುನಲ್ಲಿ ಹತ್ತು ತಿಂಗಳ ಮಗು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದು, ಮಗುವಿನ ಗಂಟಲಿನ ದ್ರವದ ಮಾದರಿಯನ್ನು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿದೆ. ವೈದ್ಯಕೀಯ ಸಿಬ್ಬಂದಿ ಮಗುವಿನ ವರದಿಗಾಗಿ ಕಾಯುತ್ತಿದ್ದಾರೆ ಎಂದು ತಿಳಿದುಬಂದಿದೆ.