ಕಾರ್ಕಳ: ಯೂತ್ ಬಿಲ್ಲವ ಸಂಘಟನೆಯಿಂದ ದೀಪಾವಳಿ ಆಚರಣೆ

ಕಾರ್ಕಳ: ಯೂತ್ ಬಿಲ್ಲವ ಸಂಘಟನೆ ಕಾರ್ಕಳ ಇದರ ವತಿಯಿಂದ ಬೆಳಕಿನ ಹಬ್ಬ ದೀಪಾವಳಿಯನ್ನು ಕೋಟಿ-ಚೆನ್ನಯ ಥೀಮ್ ಪಾರ್ಕ್ ನಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾರ್ಕಳ ಪುರಸಭೆಯ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್ ಕೆ, ಯೂತ್ ಬಿಲ್ಲವ ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಜನತೆ ಉಪಸ್ಥಿತರಿದ್ದರು. ಭಕ್ತಿಭಾವದಿಂದ ಸಾಮೂಹಿಕವಾಗಿ ದೀಪ ಬೆಳಗಿಸಿ ಬಲೀಂದ್ರ ಪೂಜೆಯನ್ನು ನೆರವೇರಿಸಲಾಯಿತು. ಬೆಳಿಗ್ಗೆ ಕೋಟಿ-ಚೆನ್ನಯ ಥೀಮ್ ಪಾರ್ಕ್ ನಲ್ಲಿ ಸ್ವಚ್ಛತಾ ಕಾರ್ಯಕ್ರಮ ಕೈಗೊಳ್ಳಲಾಯಿತು.