ಕಾರ್ಕಳ: ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಮಾರಣಾಂತಿಕ ಹಲ್ಲೆ
ಕಾರ್ಕಳ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರೊಬ್ಬರಿಗೆ ಬಜರಂಗದಳದ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಬಜರಂಗದಳದ ನಿಟ್ಟೆ ಗ್ರಾಮದ ಸುನಿಲ್, ಸುಧೀರ್, ಶರತ್, ಪ್ರಸಾದ್, ಜಗದೀಶ್ ಹಲ್ಲೆ ಮಾಡಿದ ಆರೋಪಿಗಳು. ಇವರು ಮಾ. 14ರಂದು ತಡರಾತ್ರಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ನಿಟ್ಟೆ ಗ್ರಾಮದ ಅನಿಲ್ ಪೂಜಾರಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಅನಿಲ್ ಅವರ ತಲೆ ಹಾಗೂ ಮುಖದ ಭಾಗಕ್ಕೆ ಗಾಯವಾಗಿದೆ. ತಕ್ಷಣವೇ ಅವರನ್ನು ಸ್ಥಳೀಯರು ಹಿಂಜಾವೇ ಕಾರ್ಯಕರ್ತರು ಕಾರ್ಕಳ […]