ಕಾರ್ಕಳ: ತಾಲೂಕಿನಾದ್ಯಂತ ನಡೆಯುತ್ತಿರುವ ಗೋಕಳ್ಳತನದ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆ ಆಗ್ರಹ

ಕಾರ್ಕಳ: ಕಾರ್ಕಳ ತಾಲ್ಲೂಕಿನ ಕೆಲವು ಭಾಗಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋವುಗಳ ಕಳ್ಳತನದ ವಿರುದ್ಧ ಹಿಂದೂ ಜಾಗರಣ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ. ಅಜೆಕಾರು, ಶಿರ್ಲಾಲು, ಅಂಡಾರು, ಕೆರ್ವಾಶೆ ಭಾಗದಲ್ಲಿ ಹಟ್ಟಿಯಿಂದಲೇ ದನಗಳ ಕಳ್ಳತನವಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಶಿರ್ಲಾಲು ಒಂದೇ ಗ್ರಾಮದಲ್ಲಿ ಸುಮಾರು 25 ದನ ಕಳ್ಳತನವಾಗಿದೆ. ತಾಲೂಕಿನಾದ್ಯಂತ ಎಗ್ಗಿಲ್ಲದೆ ನಡೆಯುತ್ತಿರುವ ಗೋ ಕಳ್ಳತನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಗೋ ಕಳ್ಳರನ್ನು ಶೀಘ್ರವೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ದನಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡಬೇಕು. […]