ಸಾಣೂರು ಯುವಕ ಮಂಡಲದಿಂದ ಮಾಹಿತಿ ಕಾರ್ಯಕ್ರಮ

ಕಾರ್ಕಳ: ಸಾಣೂರು ಯುವಕ ಮಂಡಲದ ಆಶ್ರಯದಲ್ಲಿ ರಾಷ್ಟ್ರಿಯ ಆರೋಗ್ಯ ಕಾರ್ಯಕ್ರಮಗಳ ಅರಿವು ಮೂಡಿಸುವ ಮಾಹಿತಿ ಕಾರ್ಯಕ್ರಮ ಭಾನುವಾರ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು‌. ಕಾರ್ಯಕ್ರಮ ಉದ್ಘಾಟಿಸಿ ಮಂಡಲದ ಹಿರಿಯ ಸದಸ್ಯ ಶ್ಯಾಮ್ ಶೆಟ್ಟಿ ಸಾಣೂರು ಮಾತನಾಡಿ, ಆರೋಗ್ಯವಂತ ವ್ಯಕ್ತಿಯೇ ಅತ್ಯಂತ ನೆಮ್ಮದಿಯಿಂದ ಇರಲು ಸಾಧ್ಯ ಎಂದರು. ಆರೋಗ್ಯ ಇಲಾಖೆಯ ಶಶಿಧರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಕೃಷ್ಣಾನಂದ ಶೆಟ್ಟಿ ರಾಷ್ಟ್ರೀಯ ಆರೋಗ್ಯ ಇಲಾಖೆಯ ಸಂಪೂರ್ಣ ಮಾಹಿತಿ ನೀಡಿದರು. ಮಂಡಲದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. […]