ಕಾರ್ಕಳ:ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ 2024

ಕಾರ್ಕಳ : ಜ್ಞಾನಸುಧಾ ಕಾರ್ಕಳದ ಆಸ್ತಿಯಾಗಿದ್ದು,ಸಂಸ್ಕಾರ, ಸದ್ವಿಚಾರದ ಅಡಿಪಾಯವನ್ನು ಶಿಕ್ಷಣದ ಜೊತೆಗೆ ನೀಡುತ್ತಿರುವ ಇಲ್ಲಿನ ಕಾರ್ಯ ಶ್ಲಾಘನೀಯ.ಡಾ.ಸುಧಾಕರ್ ಶೆಟ್ಟಿಯವರ ತಂಡದ ಸಂಘಟಿತಪ್ರಯತ್ನ ಪ್ರಶಂಸನೀಯ. ವಿದ್ಯಾರ್ಥಿಗಳು ನವಭಾರತವನ್ನು ನಿರ್ಮಿಸುವುದಕ್ಕಾಗಿಸಂಕಲ್ಪತೊಡಬೇಕು ಎಂದು ಕ್ಷೇತ್ರದ ಶಾಸಕರಾದಶ್ರೀ.ವಿ.ಸುನಿಲ್ ಕುಮಾರ್ ನುಡಿದರು.ಅವರು ಗಣಿತನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಡಿಸೆಂಬರ್ 22, 2024ರಂದುನಡೆದ ಜ್ಞಾನಸುಧ ಸಂಸ್ಥಾಪಕರ ಹಾಗೂ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಳಿಗೆ ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿಮಾತನಾಡಿದರು. ಮುಖ್ಯ ಅತಿಥಿಗಳಾಗಿದ್ದ ಎಂ.ಆರ್.ಜಿ.ಗ್ರೂಪ್‌ಗಳಸಂಸ್ಥಾಪಕ ಹಾಗೂ ಉದ್ಯಮಿಗಳಾದ ಶ್ರೀ ಕೆ. ಪ್ರಕಾಶ್ಶೆಟ್ಟಿಯವರು, ಸಮಾಜದ […]