ಜ್ಞಾನಸುಧಾ: ಪ್ರತಿಷ್ಠಾ ಮಹೋತ್ಸವದ ಸಂಭ್ರಮ, ಪ್ರತಿಭಾ ಪುರಸ್ಕಾರ 68.79ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ.
ಕಾರ್ಕಳ: ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಬೆಳೆಸುತ್ತಿರುವ ಜ್ಞಾನಸುಧಾದ ಕಾರ್ಯವು ಸ್ತುತ್ಯಾರ್ಹವಾದುದು. ಡಾ.ಸುಧಾಕರ್ ಶೆಟ್ಟಿಯವರ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಉಡುಪಿಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ನುಡಿದರು. ಅವರು ಗಣಿತನಗರದ ಜ್ಞಾನಸುಧಾ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ 11ನೇ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ಹಾಗೂ ‘ಜ್ಞಾನಸುಧಾ ಪ್ರತಿಭಾ ಪುರಸ್ಕಾರ’ದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.)ನ ಸಂಸ್ಥಾಪಕರಾದ ನಾಡೋಜ ಡಾ. ಜಿ. ಶಂಕರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ, ವಿದ್ಯಾರ್ಥಿಗಳು […]