ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ- ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್

ಉಡುಪಿ: ಕಾರ್ಕಳದಲ್ಲಿ ಇತ್ತೀಚೆಗೆ ನಡೆದಿದ್ದ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ ಎಂದು ಹೇಳಿರುವ ಕಾಂಗ್ರೆಸ್ ಈ ಸಂಬಂಧ ಆತನ ಫೋಟೋಗಳನ್ನು ಬಿಡುಗಡೆ ಮಾಡಿದೆ. ಕಾರ್ಕಳ ಮತ್ತು ಉಡುಪಿ ಯುವ ಕಾಂಗ್ರೆಸ್ ನಾಯಕರು ಫೋಟೋ ಬಿಡುಗಡೆಗೊಳಿಸಿದ್ದು, ಬಿಜೆಪಿಯ ದ್ವಂದ್ವ ನಿಲುವಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಮೊದಲ ಆರೋಪಿ ಅಲ್ತಾಫ್ ಬಂಧನ ನಡೆದಾಗ ಬಿಜೆಪಿ ಪಟಾಲಂ ಅಬ್ಬರಿಸಿ ಬೊಬ್ಬಿರಿಯಿತು. ಸಂತ್ರಸ್ತ ಹುಡುಗಿ ಹಿಂದುವಾಗಿ ಕಂಡಳು. ಅತ್ಯಾಚಾರ ಪ್ರಕರಣವನ್ನು “ಜಿಹಾದಿ” ಕೃತ್ಯವಾಗಿ ಚಿತ್ರಿಸಲಾಯಿತು. ಸರಣಿ ಪ್ರತಿಭಟನೆ, ಪತ್ರಿಕಾ ಹೇಳಿಕೆಗಳು […]