ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ ಐದಕ್ಕೆ ಏರಿಕೆ..!
ಕಾರ್ಕಳ: ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಎರಡು ದಿನಗಳ ಹಿಂದೆ ವಶಕ್ಕೆ ಪಡೆದುಕೊಂಡ ಇಬ್ಬರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು ಆ.28ರಂದು ಬಂಧಿಸಿದ್ದಾರೆ. ಅವರನ್ನು ಕೂಡ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದು ಕೊಳ್ಳಲಾಗಿದೆ. ಬಂಧಿತ ಆರೋಪಿಗಳ ಪೈಕಿ ಅಭಯ್‌ನನ್ನು ಪೊಲೀಸರು ಈಗಾಗಲೇ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದರು. ಉಳಿದ ಇಬ್ಬರು ಆರೋಪಿಗಳಾದ ಅಲ್ತಾಫ್ […]