ಕಾರ್ಕಳ: ಮಾನಸಿಕ ಅಸ್ವಸ್ಥ ನಾಪತ್ತೆ
ಉಡುಪಿ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಾರ್ಕಳ ತಾಲೂಕು ರೆಂಜಾಳ ಗ್ರಾಮದ ಬ್ರಹ್ಮರಹಾಡಿ ನಿವಾಸಿ ಹರೀಶ್ ಶೆಟ್ಟಿ (33) ಎಂಬ ವ್ಯಕ್ತಿಯು ಮೇ 24 ರಂದು ಮಧ್ಯಾಹ್ನ 2.45 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 168 ಸೆಂ.ಮೀ ಎತ್ತರ, ಗೋಧಿ ಮೈಬಣ್ಣ, ಅಗಲ ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ […]