ಕಾರ್ಕಳ: ಮಿನಿ ಲಾರಿ- ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಮೃತ್ಯು
ಉಡುಪಿ: ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.