ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಸಮನ್ಸ್ ಜಾರಿ
ಕಾರ್ಕಳ: 2018ರ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೋರಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಡಿಸೆಂಬರ್ 10ರಂದು ವಿಚಾರಣೆಗೆ ಹಾಜರಾಗುವಂತೆ ಕೋರಿ ಕೋರ್ಟ್ ಆದೇಶ ಜಾರಿ ಮಾಡಿದೆ. 2018ರ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಪ್ರಚೋದನಕಾರಿ ಭಾಷಣ ಆರೋಪ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕಾರ್ಕಳ ನಗರ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು. […]