ಕಾರ್ಕಳ: ಎರಡು ಮಕ್ಕಳೊಂದಿಗೆ ತಾಯಿ ನಾಪತ್ತೆ

ಕಾರ್ಕಳ: ಎರಡು ಪುಟ್ಟ ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಜೋಡುಕಟ್ಟೆ ಎಂಬಲ್ಲಿ ನಡೆದಿದೆ. ಮಿಯ್ಯಾರು ಗ್ರಾಮದ ಜೋಡುಕಟ್ಟೆ ನಿವಾಸಿ ಜ್ಯೋತಿ (25) ಎಂಬವರು ಮಕ್ಕಳಾದ ಚರಣ್ (7) ತೃಪ್ತಿ (5)ಯೊಂದಿಗೆ ನಾಪತ್ತೆಯಾಗಿದ್ದಾರೆ. ಜ. 13ರಂದು ಮನೆಯಲ್ಲಿ ಯಾರಿಗೂ ಹೇಳದೆ ಹೋದವರು ಮರಳಿ ಮನೆಗೆ ಬಂದಿಲ್ಲ ಎಂದು ಜ್ಯೋತಿ ಅವರ ಪತಿ ಗಣೇಶ್‌ ಕಾರ್ಕಳ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.