ಕಾರ್ಕಳ ಎಂ.ಪಿ.ಎಂ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ

ಉಡುಪಿ: ಗ್ರಂಥಾಲಯಗಳು ಶೈಕ್ಷಣಿಕ ಸಂಸ್ಥೆಗಳ ಆತ್ಮ, ಗ್ರಂಥಾಲಯಗಳು ನೀಡುವ ಪ್ರತಿಯೊಂದು ಸೇವೆಗಳೂ  ಅತ್ಯುತ್ತಮ ನಾಗರಿಕ ಸಮಾಜದ ನಿರ್ಮಾಣಕ್ಕೆ ಬುನಾದಿಯಾಗುತ್ತವೆ” ಎಂದು ಕಾರ್ಕಳ ಎಂ.ಪಿ.ಎಂ. ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಶ್ರೀವರ್ಮ ಅಜ್ರಿ ಎಂ. ಹೇಳಿದರು. ಅವರು ಎಂ.ಪಿ.ಎಂ ಸರಕಾರಿ ಪ್ರಥಮ ದರ್ಜೆ ಕಾಲೇಜು, ಗ್ರಂಥಾಲಯ ಪಿತಾಮಹ ಪದ್ಮಶ್ರೀ ಡಾ| ಎಸ್ ಆರ್. ರಂಗನಾಥನ್ ರವರ 128 ನೇ ಜನ್ಮದಿನದ ಅಂಗವಾಗಿ ನಡೆದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯಲ್ಲಿ ಮಾತನಾಡಿದರು. ಮನೆಯಲ್ಲಿಯೇ ವಿದ್ಯಾಭ್ಯಾಸವನ್ನು ಮುಂದುವರಿಸುವಂತಹ ಇಂದಿನ ಪರಿಸ್ಥಿತಿಯಲ್ಲಿ […]