ಕಾರ್ಕಳ: ಲವ್ ಜಿಹಾದ್, ಉಗ್ರಗಾಮಿ ಚಟುವಟಿಕೆಯ ವಿರುದ್ಧ ಹಿಂದು ಜಾಗರಣ ವೇದಿಕೆ ಪ್ರತಿಭಟನೆ

ಕಾರ್ಕಳ: ಲವ್ ಜಿಹಾದ್ ಮತ್ತು ಉಗ್ರಗಾಮಿ ಚಟುವಟಿಕೆಯ ವಿರುದ್ಧ ಹಿಂದು ಜಾಗರಣ ವೇದಿಕೆ ಕಾರ್ಕಳ ಘಟಕದ ವತಿಯಿಂದ ತಾಲೂಕು ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆ ಜಮಾಯಿಸಿದ್ದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಲವ್‌ ಜಿಹಾದ್‌ ಹಾಗೂ ಭಯೋತ್ಪಾದಕರ ವಿರುದ್ಧ ಧಿಕ್ಕಾರ ಕೂಗಿದರು. ಲವ್ ಜಿಹಾದ್ ವಿರುದ್ಧ ಕಠಿಣ ಕಾಯ್ದೆ ಮತ್ತು ಕರಾವಳಿ ತೀರದಲ್ಲಿ ಹೆಚ್ಚುತ್ತಿರುವ ಉಗ್ರಗಾಮಿ ಚಟುವಟಿಕೆಯನ್ನು ಹತ್ತಿಕ್ಕಲು ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಸ್ಥಾಪಿಸಲು ಆಗ್ರಹಿಸಿದರು. ಪ್ರತಿಭಟನೆ ಬಳಿಕ ತಹಶೀಲ್ದಾರ್ ಮೂಲಕ […]