ಮೇ 2 : ಕಾರ್ಕಳ ಪುರಸಭೆ, ಸಾರ್ವಜನಿಕ ಕುಂದುಕೊರತೆ ಸಭೆ
ಉಡುಪಿ: ಕಾರ್ಕಳ ಪುರಸಭೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಚರ್ಚಿಸಲು ಹಾಗೂ ಅಹವಾಲುಗಳನ್ನು ಸ್ವೀಕರಿಸಲು ಸಾರ್ವಜನಿಕ ಕುಂದುಕೊರತೆ ಸಭೆಯು ಮೇ 2 ರಂದು ಬೆಳಗ್ಗೆ 11.30 ಕ್ಕೆ ಕಾರ್ಕಳ ಪುರಸಭಾ ಸಭಾಭವನದಲ್ಲಿ ನಡೆಯಲಿದೆ. ಈ ಸಭೆಗೆ ಸಾರ್ವಜನಿಕರು ಹಾಜರಾಗುವಂತೆ ಕಾರ್ಕಳ ಪುರಸಭೆಯ ಆಡಳಿತಾಧಿಕಾರಿ ಹಾಗೂ ಕುಂದಾಪುರ ಸಹಾಯಕ ಕಮೀಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.