ಕಾರ್ಕಳ: ಯುವತಿಯ ಅಪಹರಣ, ಅತ್ಯಾಚಾರ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಉಡುಪಿ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಅಲ್ತಾಫ್ ಹಾಗೂ ಸುಧೀರ ಎಂಬಾತನನ್ನು ಬಂಧಿಸಲಾಗಿದ್ದು ಇವರು ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್ ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯವಾಗಿದ್ದು […]