ಕಾರ್ಕಳ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ

ಉಡುಪಿ: ಮೂರು ವರ್ಷಗಳ ಹಿಂದೆ ಕಾರ್ಕಳ ಪೊಲೀಸ್ ವೃತ್ತ ವ್ಯಾಪ್ತಿಯಲ್ಲಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾಗಲು ಕಾರಣನಾದ ಆರೋಪಿಯ ಕೃತ್ಯ ಸಾಕ್ಷ್ಯಾಧಾರಗಳಿಂದ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಆತನನ್ನು ಅಪರಾಧಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳು ಕಲ್ಪನಾ ಅವರು ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ಶಂಕರ್ (30) ಅತ್ಯಾಚಾರ ಎಸಗಿದ ಅಪರಾಧಿ. ಈತನಿಗೆ ಪೋಕ್ಸೋ ಕಾಯ್ದೆಯಡಿ ಜೀವಾವಧಿ ಶಿಕ್ಷೆ, 15 ಸಾವಿರ ದಂಡ […]