ಕಾರ್ಕಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ

ಕಾರ್ಕಳ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಪೋಕ್ಸೋ ಕಾಯ್ದೆಯಡಿ ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುಲ್ವಾಡಿಯ ಇಮ್ರಾನ್ (24) ಎಂದು ಗುರುತಿಸಲಾಗಿದೆ. ಈತ 12 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದೆ. ಈ ಬಗ್ಗೆ ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಬಾಲಕಿಯ ಮನೆಗೆ ಹೋಗಿ ಆಪ್ತ ಸಮಾಲೋಚನೆ ನಡೆಸಿದಾಗ ಲೈಂಗಿಕ‌ ಕಿರುಕುಳ […]