ಕಾರ್ಕಳ ತಾಲೂಕು ಸಾಹಿತ್ಯ ಸಮ್ಮೇಳನ: ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ: ಇದೇ ಜನವರಿ 30 ರಂದು ಬೈಲೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಲಿರುವ 17 ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬೈಲೂರಿನ ಶ್ರೀ ಮಾರಿಯಮ್ಮ ದೇವಸ್ಥಾನದ ಆವರಣದಲ್ಲಿ ನಡೆಯಿತು. ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಗೌರವಾಧ್ಯಕ್ಷ ಡಾ. ಜೆ.ದಿನೇಶ್ಚಂದ್ರ ಹೆಗ್ಡೆ ಮಾತನಾಡಿ, ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಮ್ಮ ಬೈಲೂರಿನ ಹೆಮ್ಮೆಯ ಸರಕಾರಿ ಪದವಿ ಪೂರ್ವ ಕಾಲೇಜಿನ […]