ಮುನಿಯಾಲು ಆಯುರ್ವೇದ ಕಾಲೇಜಿನ ಎನ್. ಎಸ್. ಎಸ್. ಘಟಕದಿಂದ ಕಾರ್ಯಕ್ರಮ

ಮುನಿಯಾಲು: ಗುರುವಾರದಂದು ಮಣಿಪಾಲದ ಮುನಿಯಾಲು ಆಯುರ್ವೇದ ಕಾಲೇಜಿನ ಎನ್. ಎಸ್. ಎಸ್. ಘಟಕ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಬೆಂಗಳೂರು, ಯುನಿಸೆಫ್ ಸಹಭಾಗಿತ್ವದಲ್ಲಿ ‘ಆರೋಗ್ಯ ಮತ್ತು ಪೌಷ್ಟಿಕ ಸೇವೆಗಳನ್ನು ಪಡೆಯಲು ಸಮುದಾಯಗಳಲ್ಲಿ ಸಾಮಾಜಿಕ ಮತ್ತು ನಡವಳಿಕೆಯ ಬದಲಾವಣೆಗಾಗಿ ಎನ್. ಎಸ್. ಎಸ್. ಸ್ವಯಂ ಸೇವಕರ ತೊಡಗಿಸಿಕೊಳ್ಳುವಿಕೆ ಯೋಜನೆ’ ಕಾರ್ಯಕ್ರಮ ನಡೆಯಿತು. ಕಾಲೇಜಿನ ಎನ್. ಎಸ್. ಎಸ್ ಅಧಿಕಾರಿ ಡಾ. ಸುದೀಪ ಇವರು ಎನ್. ಎಸ್. ಎಸ್. ಮಹತ್ವ ಮತ್ತು ಯೋಜನೆಯ ಬಗ್ಗೆ ಪ್ರಾಸ್ತಾವಿಕವಾಗಿ ವಿವರಿಸಿದರು. […]

ಕುಕ್ಕುಂದೂರು : ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕುಕ್ಕುಂದೂರು : ವಾಣಿಜ್ಯ ನಗರಿಯಾಗಿ ಬೆಳೆಯುತ್ತಿರುವ ಕುಕ್ಕುಂದೂರು ಗ್ರಾ.ಪಂ. ವ್ಯಾಪ್ತಿಯ ಜೋಡುರಸ್ತೆಯಲ್ಲಿ ಸುಮಾರು 6.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಂಕ್ರೀಟ್‌ ಚರಂಡಿ, ಅಲಂಕಾರಿಕಾ ಬೀದಿ ದೀಪಗಳ ಅಳವಡಿಕೆ ಹಾಗೂ ಎರಡು ಬದಿಯ ಪಾದಾಚಾರಿ ಮಾರ್ಗಕ್ಕೆ ಇಂಟರ್‌ ಲಾಕ್‌ ಅಳವಡಿಕೆಯ ಕಾಮಗಾರಿಗೆ ಎ. 25 ರಂದು ಬೆಳಿಗ್ಗೆ 8 ಗಂಟೆಗೆ ಸಚಿವ ವಿ. ಸುನಿಲ್‌ ಕುಮಾರ್‌ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಸ್ವರ್ಣ ಕಾರ್ಕಳ ಸ್ವಚ್ಛ ಕಾರ್ಕಳ ಪರಿಕಲ್ಪನೆಯಡಿ ಕ್ಷೇತ್ರಾದ್ಯಂತ […]

ಮನೆ ಮನೆ ಮಾತಾಗಲಿರುವ ಕಾರ್ಕಳ ಉತ್ಸವ: ಮಾರ್ಚ್ 10 ರಿಂದ 20 ರವರೆಗೆ ಸಂಸ್ಕೃತಿಯ ರಸದೌತಣ

ಕಾರ್ಕಳ: ಮಾರ್ಚ್ 10 ರಿಂದ 20 ರವರೆಗೆ ಕಾರ್ಕಳ ದಲ್ಲಿ ನಡೆಯುವ ಕಾರ್ಕಳ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಸೋಮವಾರದಂದು ಕಾರ್ಕಳ ಸ್ವರಾಜ್ಯ ಮೈದಾನದಲ್ಲಿ ನಡೆಯಿತು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ಸಂಸ್ಕೃತಿಯನ್ನು ಬಿಂಬಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಇದು ಮನೆ ಮನೆ ಮಾತಾಗಲಿದೆ ಎಂದರು. ನ್ಯಾಯವಾದಿ ಎಂ.ಕೆ ವಿಜಯ ಕುಮಾರ್, ವೆಂಕಟ್ರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಮ್ ಪ್ರಭು, ಅನಂತ ಪದ್ಮನಾಭ ದೇವಸ್ಥಾನದ […]

ಕಾರ್ಕಳದ ಅತ್ತೂರು ಬೆಸಿಲಿಕಾ ಚರ್ಚಿನಲ್ಲಿ ಸಂಭ್ರಮದ ವಾರ್ಷಿಕೋತ್ಸವಾಚರಣೆಗಳು ಪ್ರಾರಂಭ

ಕಾರ್ಕಳ: ಫೆ.20, ಭಾನುವಾರದಂದು, ಅತ್ತೂರಿನ ಸಂತ ಲಾರೆನ್ಸ್ ಮೈನರ್ ಬೆಸಿಲಿಕಾದ ವಾರ್ಷಿಕ ಉತ್ಸವದ ಆಚರಣೆಗಳು ಸಂಭ್ರಮದಿಂದ ಆರಂಭವಾಯಿತು. ಜನವರಿ ಕೊನೆಯ ವಾರದಲ್ಲಿ ನಡೆಯಬೇಕಿದ್ದ ವಾರ್ಷಿಕ ಹಬ್ಬವನ್ನು ಕೋವಿಡ್ ಭೀತಿಯಿಂದಾಗಿ ಮುಂದೂಡಲಾಗಿತ್ತು. ಭಾನುವಾರ ಬೆಳಗ್ಗೆ ಧ್ವಜಾರೋಹಣದೊಂದಿಗೆ ವಾರ್ಷಿಕ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಬೆಳಗಿನ ಜಾವ ನಡೆದ ಹಬ್ಬದ ಪವಿತ್ರ ಆಚರಣೆಯ ಅಧ್ಯಕ್ಷತೆಯನ್ನು ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್ ಡಾ.ಫ್ರಾನ್ಸಿಸ್ ಸೆರಾವೋ ವಹಿಸಿದ್ದರೆ, ಸಂಜೆ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ ವಹಿಸಿದ್ದರು.   […]

ಉಡುಪಿ ಸೀರೆ ಪುನಶ್ಚೇತನಗೈದ ಕದಿಕೆ ಟ್ರಸ್ಟ್ ಗೆ ನಬಾರ್ಡ್ ನಿಂದ ಸಿಕ್ಕಿತು ರಾಷ್ಟ್ರಮಟ್ಟದ ಹೆಗ್ಗಳಿಕೆ

ಕಾರ್ಕಳ: ಕಳೆದ ಮೂರುವರೆ ವರ್ಷಗಳಿಂದ ಅಳಿವಿನಂಚಿನಲ್ಲಿದ್ದ ಉಡುಪಿ ಸೀರೆ ನೇಕಾರಿಕೆ ಪುನಶ್ಚೇತನಕ್ಕೆ ಶ್ರಮಿಸುತ್ತಿರುವ ಕದಿಕೆ ಟ್ರಸ್ಟ್ ಈ ಸಲದ ನಬಾರ್ಡ್ ಮುಂಬೈ ಮುಖ್ಯ ಕಚೇರಿಯಿಂದ ಕೈಮಗ್ಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಂಸ್ಥೆಗಳಲ್ಲಿ ಒಂದು ಎಂಬುದಾಗಿ ರಾಷ್ಟ್ರ ಮಟ್ಟದಲ್ಲಿ ಆಯ್ಕೆ ಆಗಿದೆ. ಆಗಸ್ಟ್ 6 ರಂದು ನಡೆದ ಈ ಆನ್ಲೈನ್ ಕಾರ್ಯಕ್ರಮದಲ್ಲಿ ಕೊಡಲಾದ ಈ ಪ್ರಶಸ್ತಿಯನ್ನು ಆ.16 ರಂದು ಕಿನ್ನಿಗೋಳಿಯ ತಾಳಿಪಾಡಿ ನೇಕಾರ ಸಂಘದಲ್ಲಿ ನಡೆದ ರಾಷ್ಟ್ರೀಯ ಕೈಮಗ್ಗ ಸಪ್ತಾಹ ಆಚರಣೆಯ ಸಂದರ್ಭದಲ್ಲಿ ದ ಕ ಜಿಲ್ಲಾಧಿಕಾರಿ […]