ಸ.ಹಿ.ಪ್ರಾ.ಶಾಲೆ ಕಾರ್ಕಳ ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ ಉಚಿತ ಬೇಸಿಗೆ ಶಿಬಿರ “ಕಲಾ ಸಿಂಚನ- 2023”
ಕಾರ್ಕಳ : ಸ.ಹಿ.ಪ್ರಾ.ಶಾಲೆ ಕಾರ್ಕಳ ಮೈನ್ ಇಲ್ಲಿ 6 ರಿಂದ 13 ವರ್ಷ ವಯೋಮಿತಿಯ ಸರಕಾರಿ ಶಾಲೆಯ ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ ಕಲಾ ಸಿಂಚನ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆಯಾದ ಶ್ರೀಮತಿ ಶೋಭಾ ಅವರು ವಹಿಸಿ ಶುಭ ಹಾರೈಸಿದರು. ಶಾಲಾ ಹಿತೈಷಿ ಹಾಗೂ ಪೋಷಕರಾದ ಶ್ರೀ ವಿನಯ್ ಉಪಸ್ಥಿತರಿದ್ದು ಶಿಬಿರಕ್ಕೆ ಶುಭ ಹಾರೈಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಇಂತಹ ಶಿಬಿರ ಅತ್ಯಂತ ಮಹತ್ವಪೂರ್ಣವಾದುದು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ […]