ತುಳು ಮಾತನಾಡಿದಕ್ಕೆ ಚಿಕಿತ್ಸೆ ನಿರಾಕರಣೆ ಆರೋಪ: ಕಾರ್ಕಳ ಟಿಎಂಎ ಪೈ ಆಸ್ಪತ್ರೆಯಿಂದ ಸ್ಪಷ್ಟನೆ

ಉಡುಪಿ: ಕಾರ್ಕಳದ ಟಿಎಂಎ ಪೈ  ಆಸ್ಪತ್ರೆಯ ಮೇಲೆ ತುಳು ಮಾತನಾಡಿದಕ್ಕೆ ಚಿಕಿತ್ಸೆ ನೀಡಲು ನಿರಾಕರಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಸುಮಂತ್ ಎಂಬವರು ತಮ್ಮ ಟ್ವೀಟರ್ ಖಾತೆಯಲ್ಲಿ ಆರೋಪ ಮಾಡಿದ್ದಾರೆ. ಇಂದು ನಾನು ಕಾರ್ಕಳದ ಟಿಎಂಎ ಪೈ ಆಸ್ಪತ್ರೆಗೆ ಭೇಟಿ ನೀಡಿದ್ದೆ. ಅಲ್ಲಿ ಮಣಿಪಾಲ ಆಸ್ಪತ್ರೆಯ ವೈದ್ಯರಾದ ಅಶ್ವಲ್ ಅವರು, ಕನ್ನಡದಲ್ಲಿ ಮಾತನಾಡಿದರೆ ಮಾತ್ರ ಚಿಕಿತ್ಸೆ ನೀಡುತ್ತೇನೆ. ತುಳುವಿನಲ್ಲಿ ಮಾತನಾಡಿದರೆ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದ್ದರು ಎಂದು ಬರೆದುಕೊಂಡಿದ್ದಾರೆ. ಸುಮಂತ್ ಅವರ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ […]