ಕಾರ್ಲ ಕಜೆ, ಬಿಳಿಬೆಂಡೆಗೆ ರಾಜ್ಯದಾದ್ಯಂತ ಮಾರುಕಟ್ಟೆ ಕಲ್ಪಿಸಲು ಪ್ರಯತ್ನ: ಸಚಿವ ಸುನಿಲ್ ಕುಮಾರ್
ಕಾರ್ಕಳ: ಕಾರ್ಲ ಕಜೆ ಮತ್ತು ಕಾರ್ಲ ಬಿಳಿಬೆಂಡೆಯನ್ನು ಕಾರ್ಕಳದ ಬ್ರಾಂಡ್ ಆಗಿ ರಾಜ್ಯ ಮಟ್ಟಕ್ಕೆ ವಿಸ್ತರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು. ಇಲ್ಲಿನ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಸೋಮವಾರ ಕಾರ್ಕಳ ವಿಕಾಸ ಕಚೇರಿಯಲ್ಲಿ ಆಯೋಜಿಸಿದ ಬಿಳಿಬೆಂಡೆ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಅಧಿವೇಶನ ಸಂದರ್ಭದಲ್ಲಿ ಶಾಸಕರಿಗೆ ಊಟದ ವೇಳೆ ಕಾರ್ಕಳ ಬಿಳಿ ಬೆಂಡೆಯ ಖಾದ್ಯವನ್ನು ನೀಡುವ ಮೂಲಕ ರಾಜ್ಯದಾದ್ಯಂತ ಮಾರುಕಟ್ಟೆ ಕಲ್ಪಿಸುವ ಪ್ರಯತ್ನ […]