ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಆತಂಕ ಸೃಷ್ಟಿಸಿದ್ದ ಶಂಕಿತ ಎಬೋಲಾ ಪ್ರಕರಣಕ್ಕೆ ಇದೀಗ ತೆರೆ ಬಿದ್ದಿದೆ. ಉಗಾಂಡಾದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯ ಲ್ಯಾಬ್ ವರದಿ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಸ್ಪಷ್ಟನೆ ನೀಡಿದ್ದಾರೆ. ಉಗಾಂಡಾದಿಂದ ಬಂದ ಮಹಿಳೆಯಲ್ಲಿ ಎಬೋಲಾ ವೈರಸ್‌ಗೆ ಹೋಲುವ ಕೆಲವು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಬೆಂಗಳೂರಿನ Rajiv Gandhi Institute of Chest Diseases ಆಸ್ಪತ್ರೆಗೆ ದಾಖಲಿಸಿ ಕ್ವಾರಂಟೈನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಮಹಿಳೆಯ ರಕ್ತ ಹಾಗೂ ಇತರ ಮಾದರಿಗಳನ್ನು […]

ನಿಮ್ಮ ತೋಟದ ಮನೆಯನ್ನು‌ ನೋಡಿಕೊಳ್ಳಲು ಕೃಷಿ, ಪರಿಸರ ಆಸಕ್ತಿಯುಳ್ಳ ಸೂಕ್ತ ದಂಪತಿಗಳನ್ನು ಹುಡುಕುತ್ತಿದ್ದೀರಾ?

ನಿಮ್ಮ ತೋಟದ ಮನೆಯನ್ನು‌ ನೋಡಿಕೊಳ್ಳಲು ಕೃಷಿ, ಪರಿಸರ ಆಸಕ್ತಿಯುಳ್ಳ ಸೂಕ್ತ ದಂಪತಿಗಳನ್ನು ಹುಡುಕುತ್ತಿದ್ದೀರಾ?ತೋಟ ಮತ್ತು ಮನೆಯನ್ನು ಪ್ರೀತಿಯಿಂದ ನೋಡಿಕೊಂಡು ವಾತಾವರಣವನ್ನು ಸುಂದರವಾಗಿಡುವ, ನೀವು ಪೂರ್ತಿಯಾಗಿ ನಂಬಬಹುದಾದ ವ್ಯಕ್ತಿಗಳು ಲಭ್ಯವಿದ್ದಾರೆ.

‘ಕಾವೇರಿ’ದ ನೀರು ಬಿಡುಗಡೆ ಕಾದಾಟ: ವಿಶೇಷ ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಕರ್ನಾಟಕಕ್ಕೆ ಮಂಗಳವಾರ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 13 ರಂದು “ವಿಶೇಷ ತುರ್ತು ಸಭೆ”ಗೆ ಕರೆ ನೀಡಿದ್ದಾರೆ. ತುರ್ತು ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕಾವೇರಿ ಜಲಾನಯನ ಪ್ರದೇಶದ ಸಚಿವರು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು […]

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಸುಲ್ಕೋಡ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ ಗಡಿ ಭಾಗದ ಗ್ರಾಮಸ್ಥರು

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ನೂರಾರು ಗ್ರಾಮಸ್ಥರು ಮಹಾರಾಷ್ಟ್ರದ ಗಡಿ ಪ್ರದೇಶದಲ್ಲಿ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳುವ ಪ್ರಸ್ತಾಪವನ್ನು ವಿರೋಧಿಸಿದರು. ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ಸಾಂಗ್ಲಿ, ಮೀರಜ್ ಮತ್ತು ಇಚಲಕರಂಜಿ ಜಿಲ್ಲೆಯ ಹಳ್ಳಿಗಳು ಮತ್ತು ಪಟ್ಟಣಗಳ ನಿವಾಸಿಗಳು ಮೂಲಭೂತ ಸೌಕರ್ಯಗಳನ್ನು ಪಡೆಯುವ ವಿಷಯದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಗ್ರಾಮಗಳನ್ನು ಕರ್ನಾಟಕಕ್ಕೆ ವಿಲೀನಗೊಳಿಸಬೇಕೆಂದು ಒತ್ತಾಯಿಸಿದರು. ಅಸಮಾಧಾನದ ನಡುವೆ, ಮಹಾರಾಷ್ಟ್ರ ಸರ್ಕಾರವು ಸುಲ್ಕುಡ್ ಗ್ರಾಮದಲ್ಲಿ ದೂಧ ಗಂಗಾ ನದಿಗೆ ಬ್ಯಾರೇಜ್ ನಿರ್ಮಿಸುವ ಮೂಲಕ ಇಚಲಕರಂಜಿ ಜಿಲ್ಲೆಗೆ ನೀರು ಹರಿಸಲು […]

ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ: ಯಾವ ನಗರದಲ್ಲಿ ಎಷ್ಟು ಹೆಚ್ಚಳ ತಿಳಿದುಕೊಳ್ಳಿ

ಬೆಂಗಳೂರು: ರಾಜ್ಯದ ಜನತೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಉಚಿತ ವಿದ್ಯುತ್ ನಿಂದ ಆಗುವ ನಷ್ಟವನ್ನು ಸರಿದೂಗಿಸುವ ಸಲುವಾಗಿ ವಿದ್ಯುತ್ ದರವನ್ನು ಹೆಚ್ಚಿಸಿದೆ ಎನ್ನಲಾಗಿದ್ದು, ಇದರ ವಿರುದ್ದ ವಿರೋಧ ಪಕ್ಷ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ನಾಗರಿಕರು ತಮ್ಮ ವಿದ್ಯುತ್ ಬಿಲ್‌ಗಳನ್ನು ಪಾವತಿಸುವಾಗ 200 ಯೂನಿಟ್‌ಗಳಿಗಿಂತ ಹೆಚ್ಚಿನ ಸ್ಲ್ಯಾಬ್‌ ಹೊಂದಿದವರಾಗಿದ್ದರೆ ಈ ತಿಂಗಳು ಪ್ರತಿ ಯೂನಿಟ್‌ಗೆ 2.89 ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚದ ಹೊಂದಾಣಿಕೆ ಮತ್ತು […]