ಡಿಸೆಂಬರ್​ 5ರಂದು ಕರ್ನಾಟಕ ಬಂದ್

ಬೆಂಗಳೂರು: ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್​ 5ರಂದು ಸಂಪೂರ್ಣ ಕರ್ನಾಟಕ ಬಂದ್ ಮಾಡಲು​ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಹೋರಾಟಗಾರ ವಾಟಾಳ್​ ನಾಗರಾಜ್​​​, ಮರಾಠ ಪ್ರಾಧಿಕಾರ ರಚನೆಯನ್ನು ಹಿಂಪಡೆಯಲು ಸಿಎಂ ಯಡಿಯೂರಪ್ಪ ಅವರಿಗೆ ಈ ತಿಂಗಳ 30ರವರೆಗೆ ಗಡುವು ನೀಡಿದ್ದೇವೆ. ಒಂದು ವೇಳೆ ಹಿಂಪಡೆಯದಿದ್ದರೆ ಡಿಸೆಂಬರ್ 5ರಂದು ರಾಜ್ಯಾದ್ಯಂತ ಬಂದ್​ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಅಂದು ಬೆಳಿಗ್ಗೆ 6ಗಂಟೆಯಿಂದ ಸಂಜೆ 6ಗಂಟೆವರೆಗೆ ಕರ್ನಾಟಕ ಸಂಪೂರ್ಣ […]