ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್: ರಾಜ್ಯ ರೈತ ಸಂಘ
ಬೆಂಗಳೂರು: ಕೇಂದ್ರ ಸರ್ಕಾರದ ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ರಾಜ್ಯ ರೈತ ಸಂಘವು ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಇಂದು ಅಖಿಲ ಭಾರತ ಕೃಷಿ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 9ಕ್ಕೂ ಹೆಚ್ಚು ರೈತ ಸಂಘಟನೆಗಳು, 10ಕ್ಕೂ ಹೆಚ್ಚು ದಲಿತ ಸಂಘಟನೆಗಳು ಮತ್ತು ಕಾರ್ಮಿಕ ಸಂಘಟನೆಗಳು ಈ ನಿರ್ಧಾರಕ್ಕೆ ಬೆಂಬಲ ಸೂಚಿಸಿವೆ. ಸೆ. 25ಕ್ಕೆ ರಾಷ್ಟ್ರೀಯ ಬಂದ್ ಗೆ ಕರೆ ನೀಡಿರುವುದರಿಂದ ಅಂದು ನಗರದ ಮೈಸೂರು ಬ್ಯಾಂಕ್ […]