ನಾಳೆ (ಸೆ. 29) ಕರ್ನಾಟಕ ಬಂದ್: ಸಾರಿಗೆ ಸಂಚಾರ ಅಸ್ತವ್ಯಸ್ತ ಸಾಧ್ಯತೆ; ಅಗತ್ಯ ಸೇವೆಗಳು ಅಬಾಧಿತ

ಬೆಂಗಳೂರು: ರಾಜ್ಯದ ಜನರು ನೀರಿಗಾಗಿ ತತ್ತರಿಸುತ್ತಿರುವಾಗ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ನಾಳೆ (ಸೆಪ್ಟೆಂಬರ್ 29 ಶುಕ್ರವಾರ) ಕರೆ ನೀಡಿರುವ ಕರ್ನಾಟಕ ಬಂದ್‌ ಗೆ ರಾಜ್ಯಾದ್ಯಂತ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆಯುತ್ತಿರುವ ಬಂದ್‌ನಲ್ಲಿ ಪಾಲ್ಗೊಳ್ಳಲು ಹಲವು ಸಂಘಟನೆಗಳು ಮುಂದೆ ಬಂದು ಬೆಂಬಲ ಸೂಚಿಸಿವೆ. ರಾಜ್ಯದ ನಾನಾ ಭಾಗಗಳಲ್ಲಿರುವ ಸ್ಥಳೀಯ ಸಂಘಟನೆಗಳು ಕೂಡಾ ಜೈಜೋಡಿಸಿವೆ. ಕರ್ನಾಟಕ ಬಂದ್​ಗೆ ನೈತಿಕ ಬೆಂಬಲ ನೀಡಲು […]