ಹಕ್ಕಿ ಹಬ್ಬದ ಮೂಲಕ ಸ್ಥಳೀಯ ಪಕ್ಷಿಗಳ ಪರಿಚಯ: ಬಿ.ಎಂ ಸುಕುಮಾರ ಶೆಟ್ಟಿ
ಉಡುಪಿ: ಕೊಲ್ಲೂರು ಅಭಯಾರಣ್ಯ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿರುವ ಹಲವು ಬಗೆಯ ಅಪರೂಪದ ಹಕ್ಕಿಗಳ ಬಗ್ಗೆ ಹಕ್ಕಿ ಹಬ್ಬದ ಮೂಲಕ ನಾಡಿಗೆ ಪರಿಚಯಿಸುವ ಕಾರ್ಯ ಉತ್ತಮವಾದುದು ಎಂದು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಕೊಲ್ಲೂರಿನ ಹಲ್ಕಲ್‌ನಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಗೂ ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ನಡೆದ ಕರ್ನಾಟಕ ಹಕ್ಕಿ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅರಣ್ಯ ಇಲಾಖೆಯ ಮೂಲಕ ಅರಣ್ಯದ ರಕ್ಷಣೆ ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, […]
ಕೊಲ್ಲೂರು: ಜನವರಿ 6 ರಿಂದ 8 ರ ಕರ್ನಾಟಕ ಹಕ್ಕಿ ಹಬ್ಬ
ಕೊಲ್ಲೂರು: ಕರ್ನಾಟಕ ಅರಣ್ಯ ಇಲಾಖೆ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಕರ್ನಾಟಕ ಹಕ್ಕಿ ಹಬ್ಬ ಕಾರ್ಯಕ್ರಮವು ಜನವರಿ 6 ರಿಂದ 8 ರ ವರೆಗೆ ಕೊಲ್ಲೂರಿನ ಹಲ್ಕಲ್‌ನಲ್ಲಿ ನಡೆಯಲಿದೆ. ಜ. 6 ರಂದು ಬೆಳಗ್ಗೆ 11 ಗಂಟೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು […]