ಕರಾವಳಿ, ಬಂಟ, ಬಿಲ್ಲವ ಸಮುದಾಯದ ಕಾಳಜಿ ಇಲ್ಲದ ಬೋಗಸ್ ಬಜೆಟ್: ಸುನಿಲ್ ಕುಮಾರ್
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಇತ್ತೀಚಿನ ವರ್ಷಗಳಲ್ಲಿ ರಾಜ್ಯ ಕಂಡ ಕೆಟ್ಟ ಬಜೆಟ್ ಆಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿಲ್ಲ. ಬಜೆಟ್ ಪೂರ್ತಿ ಸುಳ್ಳುಗಳೇ ತುಂಬಿದ್ದು, ಮುಗ್ಗರಿಸುತ್ತಿರುವ ರಾಜ್ಯದ ಆರ್ಥಿಕತೆಯ ಪ್ರತಿಬಿಂಬ ಇದಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ. ಬಂಟ ಅಭಿವೃದ್ಧಿ ನಿಗಮ ಸ್ಥಾಪನೆಗೆ ಬಜೆಟ್ ನಲ್ಲಿ ಅವಕಾಶ ಕಲ್ಪಿಸುತ್ತೇನೆ ಎಂದು ಘೋಷಿಸಿದ್ದ ಸಿದ್ದರಾಮಯ್ಯ ಕೈ ಕೊಟ್ಟಿದ್ದಾರೆ. ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ 1 ರೂ.ಅನುದಾನವನ್ನೂ ನೀಡಿಲ್ಲ. ಪಶ್ಚಿಮ ವಾಹಿನಿ […]
ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್: ವೆರೋನಿಕಾ ಕರ್ನೆಲಿಯೋ
ಉಡುಪಿ: ರಾಜ್ಯದ ಬಡ, ಮಧ್ಯಮ ವರ್ಗದ ಜನರ ಹಾಗೂ ಮಹಿಳೆಯರು, ಯುವಕರು, ಕೃಷಿಕರು, ಸೇರಿದಂತೆ ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. ಮುಂದಿನ 10 ವರ್ಷಗಳ ದೂರದೃಷ್ಟಿಯನ್ನು ಹೊಂದಿರುವಂತಹ ಅಭಿವೃದ್ದಿ ಪೂರಕ ಬಜೆಟ್ ಆಗಿದೆ. ಗ್ಯಾರಂಟಿಗಳಿಗೆ ಅನುದಾನ ನೀಡಿದ ಮೇಲೂ ಆರ್ಥಿಕ ಸುಸ್ಥಿತಿಯನ್ನು ನಿಭಾಯಿಸಿ ಗ್ಯಾರಂಟಿಗಳ ಜೊತೆ ಅಗತ್ಯ ಅಭಿವೃದ್ದಿಗೆ ಯಾವುದೇ ಕೊರತೆ ಮಾಡದೇ ಇರುವಂತಹ ಪ್ರಗತಿಶೀಲ ಬಜೆಟನ್ನು ನಮ್ಮ ಮುಖ್ಯಮಂತ್ರಿಗಳು […]
ಸಾಲ ಮಾಡಿ ತುಪ್ಪ ತಿನ್ನು ಎನ್ನುವ ಬಜೆಟ್ : ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್
ಉಡುಪಿ: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮಂಡಿಸಿದ 15ನೇ ಬಜೆಟ್ ಲೋಕಸಭಾ ಚುನಾವಣೆ ದೃಷ್ಟಿ ಇಟ್ಟುಕೊಂಡು ಎಲ್ಲರನ್ನೂ ತೃಪ್ತಿ ಪಡಿಸುತ್ತೇನೆ ಎಂಬ ಧ್ಯೇಯ ವಾಕ್ಯದೊಂದಿಗೆ ಸಾಲ ಮಾಡಿ ತುಪ್ಪ ತಿನ್ನು ಎಂಬಂತಿದೆ. 1 ಲಕ್ಷ 5 ಸಾವಿರ ಕೋಟಿ ಸಾಲ ಮಾಡಿ ಅದರಲ್ಲಿ 52 ಸಾವಿರ ಗ್ಯಾರಂಟಿಗಳಿಗೆ ಹಂಚಿ ಉಳಿದ ಮೊತ್ತವನ್ನು ಅವರ ಓಟು ಬ್ಯಾಂಕ್‌ಗಳಿಗೆ ಹಂಚಿ ತೃಪ್ತಿ ಪಡಿಸುವ ಪ್ರಯತ್ನ ಮಾಡಿದ್ದಾರೆ. ಶಾಸಕರುಗಳಿಗೆ ಯಾವುದೇ ಅನುದಾನ ಕೊಡದೆ, ಪೊಳ್ಳು ಬಜೆಟ್ ಮಂಡಿಸಿದ್ದಾರೆ. ಇದರ ಪರಿಣಾಮ ಮುಂದಿನ ದಿನಗಳಲ್ಲಿ ರಾಜ್ಯದ […]
ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡುವ ಗುರಿ ಹೊಂದಿರುವ ಬಜೆಟ್: ರಮೇಶ್ ಕಾಂಚನ್
ಉಡುಪಿ: ಭಾರತದ ಇತಿಹಾಸದಲ್ಲೇ ದಾಖಲೆಯ 15ನೇ ಬಜೆಟ್ ಮಂಡಿಸಿರುವ ಕರ್ನಾಟಕ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಜನಪರ 5 ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಹೊಂದಿಸುವುದರ ಜೊತೆಗೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡುವ ಗುರಿಯನ್ನು ಹೊಂದಿರುವ ಹೊಸ ಯೋಜನೆಗಳನ್ನು ನೀಡಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹರ್ಷ ವ್ಯಕ್ತಪಡಿಸಿದ್ದಾರೆ. ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ, ಅನಾರೋಗ್ಯಕ್ಕೆ ತುತ್ತಾದ ಮೀನುಗಾರರ ರಕ್ಷಣೆಗೆ 7 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದ ಪ್ರಪ್ರಥಮ […]
15ನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ: ಪ್ರವಾಸೋದ್ಯಮ, ಕೃಷಿ ಮಹಿಳೆಯರ ಸಬಲೀಕರಣ, ಶಿಕ್ಷಣ, ಆರೋಗ್ಯ; ಯಾವ ಇಲಾಖೆಗೆ ಎಷ್ಟು ಅನುದಾನ?
ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3.8 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. 15ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಿ ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ಸತತ 3 ಗಂಟೆ 15 ನಿಮಿಷ ಬಜೆಟ್ ಪ್ರತಿಯನ್ನು ಓದಿ ಮುಕ್ತಾಯಗೊಳಿಸಿದ್ದಾರೆ. ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ […]