ರಾಜ್ಯದ ಅತಿ ಚಿಕ್ಕ ತುಂಗಾ ಅಣೆಕಟ್ಟು ಭರ್ತಿ ಹಿನ್ನೆಲೆ 7,500 ಕ್ಯೂಸೆಕ್ ನೀರು ನದಿಗೆ ಬಿಡುಗಡೆ

ಶಿವಮೊಗ್ಗ : ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. 7,500 ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ.ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಉತ್ತಮ ಮಳೆಯಿಂದ ಜಿಲ್ಲೆಯ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಗಾಜನೂರು ಡ್ಯಾಂ ಭರ್ತಿಯಾಗಿದೆ.ಹೆಚ್ಚುವರಿ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಅಣೆಕಟ್ಟಿನ‌ ಹಿನ್ನೀರಿನ ಪ್ರದೇಶಗಳಾದ ಶೃಂಗೇರಿ, ಆಗುಂಬೆ, ತೀರ್ಥಹಳ್ಳಿ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇದರಿಂದ ಜಲಾಶಯದ ಒಳ ಹರಿವು ಕೂಡಾ ಹೆಚ್ಚಾಗಿದೆ. ಇದರ ಪರಿಣಾಮ ನಿನ್ನೆ ರಾತ್ರಿ 10 ಸಾವಿರ ಕ್ಯೂಸೆಕ್ […]