ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ: ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬುಧವಾರದಂದು ವೇಳಾಪಟ್ಟಿ ಪ್ರಕಟವಾಗಲಿದ್ದು ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ. ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಬೇಕಿತ್ತು. ಆದರೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿರುವುದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ […]