ಬೆಳ್ತಂಗಡಿ: ಮತಚಲಾಯಿಸಿದ ಹರೀಶ್ ಪೂಂಜಾ
ಬೆಳ್ತಂಗಡಿ: ಇಲ್ಲಿನ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು. ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿಕೆ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡಿದ ಭಾರತೀಯ ಜನತಾ ಪಕ್ಷ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಭಾರೀ ರಾಜಕೀಯ ಬಿರುಗಾಳಿ ಎಬ್ಬಿಸಿರುವ ‘ಕರ್ನಾಟಕದ ಸಾರ್ವಭೌಮತ್ವ’ ಕುರಿತು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ನೀಡಿದ ಹೇಳಿಕೆ ವಿರುದ್ಧ ಭಾರತೀಯ ಜನತಾ ಪಕ್ಷ ಸೋಮವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಶನಿವಾರದಂದು ಸೋನಿಯಾ ಗಾಂಧಿ ಅವರು ಕರ್ನಾಟಕದ ಹುಬ್ಬಳ್ಳಿ ಜಿಲ್ಲೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ್ದರು. ಕಾಂಗ್ರೆಸ್ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಪೋಸ್ಟ್ ಈ ಬಗ್ಗೆ ಪೋಸ್ಟ್ ಮಾಡಿ, “ಸಿಪಿಪಿ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಜಿ 6.5 ಕೋಟಿ ಕನ್ನಡಿಗರಿಗೆ […]
ಮೇ 10 ರಂದು ಆದಿ ಉಡುಪಿ ಸಂತೆ ರದ್ದು: ಉಡುಪಿ ನಗರಸಭೆ
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ನಡೆಯುವ ಮತದಾನ ಪ್ರಯುಕ್ತ, ಅಂದು ಬೆಳಗ್ಗೆ 6 ಗಂಟೆಯಿಂದ ಚುನಾವಣೆ ಮುಕ್ತಾಯವಾಗುವವರೆಗೆ ಉಡುಪಿ ನಗರಸಭಾ ವ್ಯಾಪ್ತಿಯ ಆದಿ ಉಡುಪಿಯಲ್ಲಿ ನಡೆಯುವ ಸಂತೆಯನ್ನು ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯ ಇತರೆ ಕಡೆಗಳಲ್ಲಿ ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
ಮೇ. 10 ರಂದು ಸಂತೆ ಜಾತ್ರೆ ಉತ್ಸವ ನಿಷೇಧ
ಉಡುಪಿ: ಕರ್ನಾಟಕ ವಿಧಾನ ಸಭಾ ಚುನಾವಣೆ 2023ರ ಸಂಬಂಧ ಮೇ 10 ರಂದು ಬೆಳಿಗ್ಗೆ 6 ಗಂಟೆಯಿಂದ, ಚುನಾವಣೆ ಮತದಾನ ಮುಕ್ತಾಯವಾಗುವವರೆಗೆ ಉಡುಪಿ ಜಿಲ್ಲೆಯಾದ್ಯಂತ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದೆ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.
ಉಡುಪಿ: ಮೇ 9 ಮತ್ತು10 ರಂದು ಕೆ. ಎಸ್.ಆರ್.ಟಿ. ಸಿ ಬಸ್ ಸಂಚಾರದಲ್ಲಿ ವ್ಯತ್ಯಯ
ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವುದರಿಂದ ಮೇ 9 ಹಾಗೂ 10 ರಂದು ಚುನಾವಣಾ ಕರ್ತವ್ಯದ ಸಾಂದರ್ಭಿಕ ಒಪ್ಪಂದದ ಮೇರೆಗೆ ಬಸ್ಸುಗಳನ್ನು ನಿಯೋಜನೆ ಮಾಡಲಾಗುತ್ತಿದ್ದು, ರಾಜ್ಯ ಸಾರಿಗೆ ಬಸ್ ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕ ಪ್ರಯಾಣಿಕರು ಕ.ರಾ.ರ.ಸಾ ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.