ಪ್ರಚಾರ ತೀವ್ರಗೊಳಿಸಿದ ಭಾರತೀಯ ಜನತಾ ಪಕ್ಷ: ಮೋದಿ-ಯೋಗಿ ಸಹಿತ ಘಟಾನುಘಟಿ ನಾಯಕರಿಂದ ಸಭೆ-ರೋಡ್ ಶೋ

ಬೆಂಗಳೂರು: ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಭಾರತೀಯ ಜನತಾ ಪಕ್ಷವು ತೀವ್ರಗೊಳಿಸಿದ್ದು, ಮುಂದಿನ ಎರಡು ವಾರಗಳಲ್ಲಿ ಹಲವಾರು ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಮಂಡ್ಯ ಮತ್ತು ವಿಜಯಪುರದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಚುನಾವಣೆಯ ಸ್ಟಾರ್ ಪ್ರಚಾರಕರಾಗಿ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಯೋಗಿ ಆದಿತ್ಯನಾಥ್ ಪ್ರವೇಶ ಮಾಡಲಿದ್ದಾರೆ. ಒಕ್ಕಲಿಗರಲ್ಲಿ ಹಲವರು ತಮ್ಮದು ನಾಥ ಪಂಥಕ್ಕೆ ಸೇರಿದ ಮಠವೆಂದು ನಂಬುತ್ತಾರೆ. ಈ ಕಾರಣದಿಂದ ಒಕ್ಕಲಿಗರು ಯೋಗಿ […]

ಕಾರ್ಕಳ: ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಕಾರ್ಕಳ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿಯ ಅನೇಕ ಹಿರಿಯ ಮುಖಂಡರು ಹಾಗೂ ಬಿಜೆಪಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಸಾಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರಾಜೇಶ್ವರಿ ರವಿ ಪೂಜಾರಿ, ಪುರಸಭೆಯ ಮಾಜಿ ಅಧ್ಯಕ್ಷ ಚಂದ್ರಹಾಸ್ ಸುವರ್ಣ, ಮುನಿಯಾಲ್ ಬಿಲ್ಲವ‌ ಸಂಘದ ಸ್ಥಾಪಾಕಾಧ್ಯಕ್ಷ, ಬಿಜೆಪಿ ಹಿರಿಯ ಮುಖಂಡ ಆನಂದ ಪೂಜಾರಿ, ಉದ್ಯಮಿ ಕಾಂತಾವರ ಉದಯ್ ಶೆಟ್ಟಿ. ಕುಕ್ಕುಂದೂರು ಪಂಚಾಯತ್ ಸದಸ್ಯ ಹಾಗೂ ನ್ಯಾಯ ಸಮಿತಿ ಅಧ್ಯಕ್ಷ ರಮೇಶ್ ಮತ್ತು ಅನೇಕ ಗ್ರಾಮಗಳ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು […]

ಏ. 27 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಡುಪಿಗೆ : ಪಕ್ಷ ಪ್ರಚಾರದಲ್ಲಿ ಭಾಗಿ

ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 27 ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಶುಕ್ರವಾರ ತಿಳಿಸಿದರು. ಕಾಂಗ್ರೆಸ್ ಭವನದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಏಪ್ರಿಲ್ 27ರಂದು ಜಿಲ್ಲೆಯ ಉಚ್ಚಿಲದಲ್ಲಿ ಮೀನುಗಾರ ಸಮುದಾಯವನ್ನು ಉದ್ದೇಶಿಸಿ ಅವರ ಸಮಸ್ಯೆಗಳು ಮತ್ತು ನೋವುಗಳನ್ನು ಅರಿಯಲಿದ್ದಾರೆ. ಕರ್ನಾಟಕ ಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಏಪ್ರಿಲ್ 23 […]

ಉಡುಪಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ- 8 ರಿಂದ 13 ರವರೆಗೆ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ

ಉಡುಪಿ: ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮೇ 8 ರಂದು ಸಂಜೆ 5 ಗಂಟೆಯಿಂದ ಮೇ 10 ರ ಮಧ್ಯರಾತ್ರಿ 12 ರ ವರೆಗೆ ಹಾಗೂ […]

ಮಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್ ಅಲಿ: ಬಂಡಾಯದ ಸುಳಿವು ನೀಡಿದ ಬಾವ

ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬುಧವಾರದಂದು 5ನೇ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಬಾಕಿ ಉಳಿದಿದ್ದ 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಭಾರೀ ಕುತೂಹಲ ಹುಟ್ಟಿಸಿದ್ದ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿ ಇನಾಯತ್ ಅಲಿ ಅವರನ್ನು ಇಳಿಸಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಮಾಜಿ ಶಾಸಕ ಮೊಯ್ದಿನ್ ಬಾವ ಇಬ್ಬರ ಮಧ್ಯೆ ಟಿಕೆಟ್ ಗಾಗಿ ಸ್ಪರ್ಧೆ ಏರ್ಪಟ್ಟಿದ್ದು, ಇದೀಗ ಕಾಂಗ್ರೆಸ್ ಹೈಕಮಾಂಡ್ ಇನಾಯತ್ ಅಲಿ […]