ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಜಾಹೀರಾತಿಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ
ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತುಗಳನ್ನು ಪ್ರದರ್ಶಿಸಲು ಪೂರ್ವಾನುಮತಿ ಕಡ್ಡಾಯವಾಗಿ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಶನಿವಾರ ತಮ್ಮ ಕಚೇರಿ ಸಭಾಂಗಣದಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಪ್ರಚಾರಪಡಿಸುವ ಪೂವಾನುಮತಿ ಕುರಿತ ಕಾರ್ಯಗಾರದಲ್ಲಿ ಮಾತನಾಡಿ, ರಾಜಕೀಯ ಪಕ್ಷಗಳು ಚುನಾವಣೆಗೆ ಸ್ಪರ್ಧಿಸಿದ ಆಭ್ಯರ್ಥಿಗಳು, ಚುನಾವಣಾ ಜಾಹೀರಾತುಗಳನ್ನು ಪ್ರಚಾರ ಮಾಡುವ ಮುನ್ನ ಜಿಲ್ಲಾ ಎಂಸಿಎಂಸಿ ಸಮಿತಿಯಿಂದ ಪೂರ್ವ ಪ್ರಾಮಾಣೀಕರಣ ಪಡೆಯಬೇಕು ಎಂದರು. ಜಾಹೀರಾತಿನಲ್ಲಿ ಇತರರನ್ನು ದೂರುವುದು, ಅಸ್ಪಷ್ಟ ಅಥವಾ ಮಾನ ಹಾನಿಕರ, ಹಿಂಸೆಗೆ ಪ್ರಚೋದನೆ, […]
ಜಿಲ್ಲೆಯಲ್ಲಿ ಒಟ್ಟು 7 ನಾಮಪತ್ರ ಸಲ್ಲಿಕೆ: ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳು ಕಣಕ್ಕೆ
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಎರಡನೇ ದಿನ ಜಿಲ್ಲೆಯಲ್ಲಿ ಒಟ್ಟು 3 ನಾಮಪತ್ರಗಳು ಸಲ್ಲಿಕೆಯಾಗಿದೆ. 118 ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಪ್ರಸಾದ್ ನಾಮಪತ್ರ ಸಲ್ಲಿಸಿರುತ್ತಾರೆ. 120 ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ನಿತಿನ್ ವಿ. ನಾಮಪತ್ರ ಸಲ್ಲಿಸಿದ್ದಾರೆ. 122 ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ್ ದೀಪಕ್ ಮೆಂಡೋನ್ಸಾ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಬೈಂದೂರು […]
ಏ. 15 ರಂದು ರಾಜಕೀಯ ಪಕ್ಷ ಪ್ರತಿನಿಧಿಗಳಿಗಾಗಿ ಸಾಮಾಜಿಕ ಮಾಧ್ಯಮ ಜಾಹೀರಾತು ಕಾರ್ಯಾಗಾರ
ಉಡುಪಿ: ಕರ್ನಾಟಕ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಮಾದರಿ ನೀತಿ ಸಂಹಿತೆಯಡಿ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತನ್ನು ನೀಡುವ ಕುರಿತು, ಜಿಲ್ಲಾ ಎಂಸಿಎಂಸಿ ಸಮಿತಿ ವತಿಯಿಂದ ಪೂರ್ವಾನುಮತಿ ಪಡೆಯುವ ಪ್ರಕ್ರಿಯೆ ಹಾಗೂ ಜಾಹೀರಾತುಗಳಲ್ಲಿ ಇರಬೇಕಾದ ಅಥವಾ ಇರಬಾರದ ವಿಷಯಗಳು ಸೇರಿದಂತೆ ಇತರ ವಿಷಯಗಳನ್ನು ವಿವರವಾಗಿ ತಿಳಿಸಲು ಎಲ್ಲಾ ರಾಜಕೀಯ ಪಕ್ಷಗಳಿಗೆ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ಅವರ ಏಜೆಂಟರುಗಳಿಗೆ ಏಪ್ರಿಲ್ 15 ರಂದು ಬೆಳಗ್ಗೆ 11.30 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಎಲ್ಲಾ […]
ರಂಗೇರಿದ ಚುನಾವಣಾ ಕಣ: ಮೊದಲ ದಿನ 4 ನಾಮಪತ್ರ ಸಲ್ಲಿಕೆ
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಮೊದಲ ದಿನದಂದು ಜಿಲ್ಲೆಯಲ್ಲಿ ಒಟ್ಟು 4 ನಾಮಪತ್ರಗಳು ಸಲ್ಲಿಕೆಯಾಗಿದೆ. 119 ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕಿರಣ್ ಕುಮಾರ್ ಕೊಡ್ಗಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಭ್ಯರ್ಥಿಯಾಗಿ ದಿನೇಶ್ ನಾಮಪತ್ರ ಸಲ್ಲಿಸಿರುತ್ತಾರೆ. 120 ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಮದಾಸ ಭಟ್ ನಾಮಪತ್ರ ಸಲ್ಲಿಸಿದ್ದಾರೆ. 122 ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ […]
ಪಕ್ಷದ ಕಾರ್ಯತಂತ್ರದಂತೆ ಚುನಾವಣೆ ಎದುರಿಸುತ್ತೇವೆ: ಪ್ರಸಾದ್ ರಾಜ್ ಕಾಂಚನ್
ಉಡುಪಿ: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ತಂತ್ರಗಾರಿಕೆ ಇಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಹೊರತು ಎದುರಾಳಿ ಅಭ್ಯರ್ಥಿಗಳ ಆಲೋಚನೆಯಿಂದಲ್ಲ. ಬಿಜೆಪಿಯ ಅಭ್ಯರ್ಥಿ ಒಂದೇ ಸಮುದಾಯಕ್ಕೆ ಸಂಬಂಧಪಟ್ಟಿದ್ದರೂ, ಇಲ್ಲಿನ ಮತದಾರರು ಬುದ್ದಿವಂತರು ಮತ್ತು ವಿದ್ಯಾವಂತರೂ ಆಗಿರುವ ಕಾರಣ ಸರಿಯಾದ ಶಾಸಕನನ್ನು ಆಯ್ಕೆ ಮಾಡಲಿದ್ದಾರೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಅವರು ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಕಳೆದ ಆರು ತಿಂಗಳಿನಿಂದ ಕ್ಷೇತ್ರದಲ್ಲಿ ಸಿದ್ದತೆ ನಡೆಸುತ್ತಿದ್ದು, 100 ಸದಸ್ಯರ ಕಮಿಟಿ […]