ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ; ಗೆಲುವಿಗಾಗಿ ಶ್ರಮ: ಲಾಲಾಜಿ ಮೆಂಡನ್

ಉಡುಪಿ: ವಿಧಾನಸಭಾ ಚುನಾವಣೆಗೆ ಕಾಪು ಕ್ಷೇತ್ರದಿಂದ ಅಭ್ಯರ್ಥಿ ಎಂದು ಘೋಷಿಸಿದ ಬಳಿಕ ಗುರ್ಮೆ ಸುರೇಶ್ ಶೆಟ್ಟಿ ಅವರು ಬುಧವಾರ ಬೆಳಿಗ್ಗೆ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಬಳಿಕ ಶಾಸಕ ಲಾಲಾಜಿ‌ ಆರ್. ಮೆಂಡನ್ ಅವರ ಮನೆಗೆ ತೆರಳಿ ಅವರೊಂದಿಗೆ ಚರ್ಚೆ ನಡೆಸಿದ್ದು ಅವರೊಂದಿಗಿನ ಮಾತುಕತೆ ಬಳಿಕ ಜಂಟಿ ಸುದ್ಧಿಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಲಾಲಾಜಿ ಮೆಂಡನ್, ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ. ಪಕ್ಷವನ್ನು ಎರಡೂವರೆ ಸಾವಿರ ಮತಗಳಿಂದ 75 ಸಾವಿರ ಮತಗಳವರೆಗೆ ಬೆಳೆಸಿದ್ದೇವೆ‌. ಮುಂದೆಯೂ ಬಿಜೆಪಿ […]

ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: 52 ಹೊಸ ಮುಖಗಳು, 8 ಮಹಿಳೆಯರಿಗೆ ಮಣೆ

ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಕರ್ನಾಟಕದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಪಟ್ಟಿಯನ್ನು ಘೋಷಿಸಿದರು. ಪಕ್ಷವು ತನ್ನ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳು ಮತ್ತು 8 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ತನ್ನ ಸಾಂಪ್ರದಾಯಿಕ ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿಸಿದ್ದರೆ, […]

ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ

ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ಚುನಾವಣೆಯಲ್ಲಿ ಅಭ್ಯರ್ಥಿಗಳ ಘೋಷಣೆಯನ್ನು ಪಕ್ಷ ವಿಳಂಬ ಮಾಡುತ್ತಿದೆ ಎಂಬ ಊಹಾಪೋಹಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ನಾನು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಈಶ್ವರಪ್ಪ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಕಳೆದ 40 ವರ್ಷಗಳಲ್ಲಿ ಪಕ್ಷ ನನಗೆ ಸಾಕಷ್ಟು ಜವಾಬ್ದಾರಿ ನೀಡಿದೆ. ನಾನು ಬೂತ್ ಉಸ್ತುವಾರಿ ಮಟ್ಟದಿಂದ ಪಕ್ಷದ ರಾಜ್ಯ […]

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ; ಗೆಲುವೇ ನನ್ನ ಗುರಿ: ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ಶಾಸಕನಾಗಿ ನನ್ನ ಅಭಿಮಾನಿಗಳ ಸೇವೆ ಮಾಡಬೇಕೆಂಬುದು ನನ್ನ ಜೀವನದ ಬಹಳ ದೊಡ್ಡ ಆಸೆ. ಆದರೆ ಹಲವು ವರ್ಷಗಳ ಕಾಲ ಪಕ್ಷಕ್ಕೆ ದುಡಿದವರನ್ನು ಬಿಟ್ಟು ನಿನ್ನೆ ಮೊನ್ನೆ ಬಂದವರಿಗೆ ಟಿಕೆಟ್ ನೀಡಲಾಗಿದೆ. ಆದುದರಿಂದ ನಾನು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ನನಗೆ ಎಲ್ಲರ ಸಹಕಾರ ಬೇಕು. ನಾನು ಗೆಲುವು ಸಾಧಿಸಿಯೇ ಸಿದ್ಧ. ಅಭಿಮಾನಿಗಳ ಸಹಕಾರದಿಂದ ಈ ಬಾರಿ ಚುನಾವಣೆಗೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದೇನೆ. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮಗೆ ಪಕ್ಷವೇ ದೊಡ್ಡದು. […]

ಅನಿವಾಸಿ ಭಾರತೀಯ ಮತದಾರರನ್ನು ಸೆಳೆಯಲು ಸ್ವೀಪ್ ನಿಂದ ವಿನೂತನ ಪ್ರಯತ್ನ

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ ಮತದಾರರಿಗೆ ಜಾಗೃತಿ ಮತ್ತು ಮತದಾನದ ಮಹತ್ವ ಕುರಿತು ಅರಿವು ಮೂಡಿಸುತ್ತಿರುವ ಜಿಲ್ಲಾ ಸ್ವೀಪ್ ಸಮಿತಿಯು, ಕಳೆದ ಬಾರಿಗಿಂತ ಹೆಚ್ಚಿನ ಮತದಾನ ನಡೆಸಲು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೇ ಮೊದಲ ಬಾರಿಗೆ ವಿದೇಶದಲ್ಲಿ ಮತ್ತು ಹೊರರಾಜ್ಯದಲ್ಲಿ ನೆಲೆಸಿರುವ ಜಿಲ್ಲೆಯ ಮತದಾರರನ್ನು ಮತಗಟ್ಟೆಗೆ ಬರುವಂತೆ ಮಾಡಲು ವಿನೂತನ ಪ್ರಯತ್ನ ಮಾಡುತ್ತಿದೆ. ಜಿಲ್ಲೆಯ ಸಾವಿರಾರು ಮಂದಿ ಉದ್ಯೋಗ, ವಿದ್ಯಾಭ್ಯಾಸ ಮತ್ತಿತರ ಕಾರಣಗಳಿಂದ ವಿದೇಶಗಳಿಗೆ ಮತ್ತು ಹೊರರಾಜ್ಯಗಳಿಗೆ ತೆರಳಿದ್ದು, ಇಲ್ಲಿಯೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. […]