ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡುವ ಸಿ-ವಿಜಿಲ್ ಆ್ಯಪ್ ನಿಂದ ಪಾರದರ್ಶಕ ಚುನಾವಣೆಗೆ ಮುನ್ನುಡಿ
ಮುಕ್ತ-ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದ್ದು, ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳು ಅಡ್ಡಿಯಾಗುತ್ತವೆ. ಇಂತಹ ಅಕ್ರಮಗಳನ್ನು ತಡೆಯಲು ಹಾಗೂ ಇವುಗಳ ವಿರುದ್ದ ತ್ವರಿತಗತಿಯಲ್ಲಿ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲು ಸಿ-ವಿಜಿಲ್ ಆ್ಯಪ್ ಅನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಚುನಾವಣಾ ಸಮಯದಲ್ಲಿ ಮತದಾರರಿಗೆ ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯ ಆಮಿಷ ನೀಡಬಹುದಾದ, ಹಣ ವಿತರಣೆ, ಉಡುಗೊರೆಗಳು ಹಾಗೂ ಕೂಪನ್ ವಿತರಣೆ, […]
ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಶಿಸ್ತು ಕ್ರಮ: ಜಿಲ್ಲಾಧಿಕಾರಿ
ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಚುನಾವಣೆ ಮತ್ತು ಪ್ರಚಾರ ಕಾರ್ಯಗಳಲ್ಲಿ ರಾಜಕೀಯ ಪಕ್ಷದವರು ಚುನಾವಣೆಯ ರ‍್ಯಾಲಿಯಲ್ಲಿ, ಕರಪತ್ರ ಹಂಚುವಿಕೆ ಕೆಲಸದಲ್ಲಿ, ಪ್ರಚಾರ ಕಾರ್ಯಗಳಲ್ಲಿ ಮತ್ತು ಇತರೆ ಕೆಲಸಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಈ ಆದೇಶಕ್ಕೆ ವ್ಯತಿರಿಕ್ತವಾಗಿ ಮಕ್ಕಳನ್ನು ಬಳಸಿಕೊಂಡಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಚುನಾವಣೆಯ ಪೂರ್ವ ತಯಾರಿ ಸಭೆ
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವ ತಯಾರಿಯ ಬಗ್ಗೆ ಚರ್ಚಿಸಲು ಮಂಗಳವಾರದಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಸಭೆ ನಡೆಯಿತು. ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಎಲ್ಲಾ ವಾರ್ಡ್ ಹಾಗೂ ಪಂಚಾಯತ್ ಗಳಿಗೆ ಉಸ್ತುವಾರಿಗಳ ನೇಮಕ ಮಾಡುವ ಬಗ್ಗೆ ಮತ್ತು ಪ್ರತಿ ವಾರ್ಡಿನಲ್ಲಿ ಸಭೆಯನ್ನು ನಡೆಸುವುದರ ಬಗ್ಗೆ ತೀರ್ಮಾನಿಸಲಾಯಿತು. ಸದಸ್ಯರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಉಡುಪಿ ಜಿಲ್ಲಾ […]
ಕಿಚ್ಚ ಸುದೀಪ್ ರಾಜಕೀಯ ರಂಗ ಪ್ರವೇಶವಿಲ್ಲ; ಪ್ರಚಾರ ಮಾತ್ರ: ಬೊಮ್ಮಾಯಿ-ಸುದೀಪ್ ಜಂಟಿ ಸುದ್ದಿಗೋಷ್ಠಿ
ಬೆಂಗಳೂರು: ಬಹುಭಾಷಾ ನಟ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಾರೆ ಎನ್ನುವ ಊಹಾಪೋಹಗಳಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಸ್ವತಃ ಸುದೀಪ್ ಅವರೇ ತೆರೆ ಎಳೆದಿದ್ದಾರೆ. ಬುಧವಾರದಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯವರನ್ನು ಮಾಮಾ ಅಂತ ಕರೆಯುತ್ತೇನೆ. ಚಿತ್ರರಂಗಕ್ಕೆ ಬಂದಾಗ ನನಗೆ ಗಾಡ್ ಫಾದರ್ ಇರಲಿಲ್ಲ. ಆಗ ನನ್ನ ಜೊತೆಯಲ್ಲಿ ಕೆಲವೇ ಕೆಲವರು ನಿಂತಿದ್ದರು. ಅಂಥಹವರಲ್ಲಿ ನನ್ನ ಮಾಮ ಸಿಎಂ ಬೊಮ್ಮಾಯಿ ಒಬ್ಬರು. ಅವರು ಕೂಡಾ ಆಗ್ಅ ತಾನೇ ರಾಜಕೀಯಕ್ಕೆ ಬಂದಿದರು. ನಾನು ಅವರ […]
ಮಾಧ್ಯಮಗಳಲ್ಲಿ ರಾಜಕೀಯ ಜಾಹೀರಾತುಗಳ ಮೇಲೆ ಎಂಸಿಎಂಸಿ ಮೂಲಕ 24*7 ನಿಗಾ
ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಫೇಸ್‌ಬುಕ್-ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ) ಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಎಂಸಿಎಂಸಿ ಯಿಂದ ಪೂರ್ವಾನುಮತಿ ಪಡೆಯದೇ ಜಾಹೀರಾತು ಪ್ರಸಾರ ಮಾಡುತ್ತಿರುವುದನ್ನು ಪರಿಶೀಲಿಸಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ […]