ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ 4% ಏರಿಕೆ

ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯನ್ನು 4% ಹೆಚ್ಚಿಸಿ ಆದೇಶ ಹೊರಡಿಸಿದೆ. 2023ರ ಜನವರಿ ತಿಂಗಳಿನಿಂದಲೇ ಅನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಹೆಚ್ಚಿಸಲಾಗಿದೆ. ಇದುವರೆಗೆ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ. 31 ಇದ್ದು, ಇದೀಗ ಇದು ಶೇ. 35 ಕ್ಕೆ ಏರಿಕೆಯಾಗಿದೆ.  

ರಾಜ್ಯ ಸರ್ಕಾರದ ಶ್ರೀಗಂಧ ನೀತಿ-2022: ರೈತರು ಶ್ರೀಗಂಧ ಬೆಳೆದು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ

ಬೆಂಗಳೂರು: ಶ್ರೀಗಂಧಕ್ಕೆ ದೇಶೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸಲು ರಾಜ್ಯ ಸರ್ಕಾರವು ಶ್ರೀಗಂಧ ನೀತಿ-2022 ಅನ್ನು ಹೊರತಂದಿದ್ದು, ಇದರಲ್ಲಿ ರೈತರು ತಮ್ಮ ಹೊಲಗಳಲ್ಲಿ ಶ್ರೀಗಂಧವನ್ನು ಬೆಳೆದು ನಂತರ ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ, ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟಕ್ಕೆ ನಿರ್ಬಂಧವಿತ್ತು .ಈ ನೀತಿ ಜಾರಿಗೆ ಬರುವುದರೊಂದಿಗೆ, ಕಳ್ಳತನ ತಡೆಯಲು ಶ್ರೀಗಂಧದ ಮರಕ್ಕೆ ರಕ್ಷಣೆ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದ್ದು, ತಂತ್ರಜ್ಞಾನದ ಬಳಕೆಯಿಂದ ಶ್ರೀಗಂಧದ ಮರಗಳಿಗೆ […]

ಯುದ್ಧ ಪೀಡಿತ ಉಕ್ರೇನ್‌ನಿಂದ ತನ್ನ ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ನೋಡಲ್ ಅಧಿಕಾರಿಯನ್ನು ನೇಮಿಸಿದ ರಾಜ್ಯ ಸರ್ಕಾರ

  ಬೆಂಗಳೂರು: ರಷ್ಯಾ-ಉಕ್ರೇನ್ ಯುದ್ಧದ ನಡುವೆ ಕರ್ನಾಟಕ ಸರ್ಕಾರವು ಯುದ್ಧ ಪೀಡಿತ ಪೂರ್ವ ಯುರೋಪಿಯನ್ ರಾಷ್ಟ್ರದಿಂದ ತನ್ನ ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಅನುಕೂಲವಾಗುವಂತೆ ನೋಡಲ್ ಅಧಿಕಾರಿಯನ್ನು ನೇಮಿಸಿ ಆದೇಶ ಹೊರಡಿಸಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ ನಾಗರಿಕರನ್ನು ಆಯಾಯ ಸ್ಥಳಗಳಿಗೆ ಸುರಕ್ಷಿತವಾಗಿ ತಲುಪಿಸಲು ಅನುಕೂಲವಾಗುವಂತೆ ಕರ್ನಾಟಕ ಸರ್ಕಾರವು ನೋಡಲ್ ಅಧಿಕಾರಿಯನ್ನು ನೇಮಿಸಿದೆ. ನೋಡಲ್ ಕಚೇರಿಯು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಕೀವ್ ನಲ್ಲಿ ಭಾರತದ ರಾಯಭಾರಿ ಕಚೇರಿಯೊಂದಿಗೆ ಸಮನ್ವಯ ಸಾಧಿಸುತ್ತದೆ ಮತ್ತು ಉಕ್ರೇನ್ ನಲ್ಲಿ ಸಿಕ್ಕಿಬಿದ್ದಿರುವ ಜನರನ್ನು ಸ್ಥಳಾಂತರಿಸಲು […]