ಕುಂದಾಪುರ: ಕರ್ನಾಟಕ ಒನ್ ಕೇಂದ್ರಗಳನ್ನು ಫ್ರಾಂಚೈಸಿ ತೆರೆಯಲು ಅರ್ಜಿ ಆಹ್ವಾನ
ಕುಂದಾಪುರ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕರ್ನಾಟಕ ಒನ್ ಕೇಂದ್ರಗಳನ್ನು ಫ್ರಾಂಚೈಸಿಗಳ ಮೂಲಕ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಕುಂದಾಪುರ ಪುರಸಭೆಯ ವ್ಯಾಪ್ತಿಯಲ್ಲಿ 2 ಫ್ರಾಂಚೈಸಿ ಕೇಂದ್ರಗಳನ್ನು ತೆರೆಯಲು ವೆಬ್ ಪೋರ್ಟಲ್ https://www.karnatakaone.gov.in/Public/FranchiseeTerms ನಲ್ಲಿ ಅರ್ಹ ಹಾಗೂ ಆಸಕ್ತ ಸಾರ್ವಜನಿಕರು ಫೆಬ್ರವರಿ 15 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.