ಮೂಡನಿಡಂಬೂರು ಹಾಗೂ ನಿಡಂಬೂರು ಯುವಕ ಮಂಡಲ ವತಿಯಿಂದ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮ
ಉಡುಪಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಗೌರವ ಡಾಕ್ಡರೇಟ್ ಪುರಸ್ಕೃತರಾದ ಉಡುಪಿ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಕಡೆಕಾರಿನ ಮೂಡನಿಡಂಬೂರು ಯುವಕ ಮಂಡಲ ರಿ. ಹಾಗೂ ನಿಡಂಬೂರು ಯುವಕ ಮಂಡಲ ಟ್ರಸ್ಟ್ ಸಹಭಾಗಿತ್ವದಲ್ಲಿ ಅದ್ದೂರಿ ಸನ್ಮಾನ ಕಾರ್ಯಕ್ರಮ ಭಾನುವಾರ ಯುವಕ ಮಂಡಲದ ಕಚೇರಿ ಸಭಾಂಗಣದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ತಲ್ಲೂರು ಶಿವರಾಮ ಶೆಟ್ಟಿ, ನಿಸ್ವಾರ್ಥ ಭಾವನೆಯಿಂದ ಮಾಡಿದ ಸೇವೆಯನ್ನು ಸಮಾಜ ಗುರುತಿಸಿರುವುದು ಸಂತೋಷ […]
ಜಾನಪದ ಉತ್ಸವ ಹಾಗೂ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ
ಕುಂದಾಪುರ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಉಡುಪಿ ಜಿಲ್ಲೆ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ, ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ ಸಂಯುಕ್ತವಾಗಿ ಆಯೋಜಿಸಿರುವ ಜಾನಪದ ಉತ್ಸವ-2022 ತಲ್ಲೂರು ಫ್ಯಾಮಿಲಿ ಟ್ರಸ್ಟ್ ಇವರ ಜಾನಪದ ಪ್ರಶಸ್ತಿ-2022 ಪ್ರಶಸ್ತಿ ಪ್ರದಾನ ಸಮಾರಂಭವು ಡಿ.18 ರಂದು ಗುಂಡ್ಮಿ-ಸಾಲಿಗ್ರಾಮ ಇಲ್ಲಿನ ಸದಾನಂದ ರಂಗ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಸ್ಥಾಪಕ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರು ವಹಿಸಿದ್ದರು. ಕಂಬಳ ಸಮಿತಿ […]
ಧಾರೇಶ್ವರ ಯಕ್ಷ ಬಳಗದ 8ನೇ ವರ್ಷದ ತಾಳಮದ್ದಲೆ ಸಪ್ತಾಹ ಸಮಾರೋಪ ಸಮಾರಂಭ
ಉಡುಪಿ: ಧಾರೇಶ್ವರ ಯಕ್ಷ ಬಳಗ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೈಂದೂರಿನ ನಾಗೂರು ಒಡೆಯರಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಸೆ.18ರಿಂದ 24ರವರೆಗೆ ನಡೆದ 8ನೇ ವರ್ಷದ ತಾಳಮದ್ದಲೆ ಸಪ್ತಾಹದ ಸಮಾರೋಪ ಸಮಾರಂಭವು ಶನಿವಾರದಂದು ನಡೆಯಿತು. ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ಯಕ್ಷಗಾನದ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು ಯಕ್ಷಗಾನ ಕಲಾರಂಗಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ. ಅವರ ಕಲಾ ಸೇವೆ ಯಕ್ಷಗಾನ ರಂಗಕ್ಕೆ ಹಾಗೂ ಅಭಿಮಾನಿಗಳಿಗೆ ಇನ್ನಷ್ಟು ಕಾಲ ಸಿಗುವಂತಾಗಬೇಕು ಎಂದರು. […]
ಅಂಬಲಪಾಡಿ: ಹಿರಿಯ ನಾಗರಿಕರನ್ನು ರಂಜಿಸಿದ ಜಾನಪದ ವೈಭವ ಕಾರ್ಯಕ್ರಮ
ಉಡುಪಿ : ತಲ್ಲೂರು ಫ್ಯಾಮಿಲಿ ಟ್ರಸ್ಟ್, ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಹಿರಿಯ ನಾಗರಿಕರ ಸಂಸ್ಥೆಯ ಸಹಕಾರದಲ್ಲಿ ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಶನಿವಾರ ನಡೆದ `ಜಾನಪದ ವೈಭವ ‘ ಕಾರ್ಯಕ್ರಮ ಹಿರಿಯ ನಾಗರಿಕರನ್ನು ರಂಜಿಸಿತು. ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಡುಪಿಯ `ಕಲಾಮಯಂ ‘ ಸಾಂಸ್ಕೃತಿಕ ತಂಡ ವೈವಿಧ್ಯಮಯ ಜಾನಪದ ನೃತ್ಯಗಳನ್ನು ಪ್ರದರ್ಶಿಸುವ ಮೂಲಕ ಜಾನಪದ ಲೋಕವನ್ನೇ […]
ಮಕ್ಕಳ ಪ್ರತಿಭೆಗೆ ತಕ್ಕ ಪ್ರೋತ್ಸಾಹ ದೊರೆತಲ್ಲಿ ಶ್ರೇಷ್ಠ ಸಾಧಕರಾಗುವುದು ನಿಶ್ಚಿತ : ಡಾ. ಶಿವರಾಮ್ ಶೆಟ್ಟಿ ತಲ್ಲೂರು
ಉಡುಪಿ : ಇಂದು ಟಿವಿ, ಸಾಮಾಜಿಕ ಜಾಲತಾಣಗಳು ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಮಕ್ಕಳ ಪ್ರತಿಭೆಗೆ ಹೆಚ್ಚಿನ ಅವಕಾಶ ಸಿಗುತ್ತಿದೆ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ಪ್ರೋತ್ಸಾಹ ನೀಡಿದರೆ ಭವಿಷ್ಯದಲ್ಲಿ ದೇಶಕ್ಕೆ ಒಬ್ಬ ಶ್ರೇಷ್ಠ ಸಾಧಕನನ್ನು ನೀಡಿದಂತಾಗುತ್ತದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ಶಿವರಾಮ ಶೆಟ್ಟಿ ತಲ್ಲೂರು ಹೇಳಿದರು. ಅವರು ಭಾನುವಾರ ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ವತಿಯಿಂದ ಹಮ್ಮಿಕೊಂಡ ಕರ್ನಾಟಕ ಮಕ್ಕಳ ಸಮ್ಮೇಳನದ ಸಮಾರೋಪ […]