ಭಾರತಿ ವಿಷ್ಣುವರ್ಧನ್ ಅವರಿಗೆ ಚೊಚ್ಚಲ ಕರ್ನಾಟಕ ನಂದಿ ಜೀವಮಾನ ಸಾಧನೆ ಪ್ರಶಸ್ತಿ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮೊದಲ ಬಾರಿಗೆ ನಂದಿ ಚಲನಚಿತ್ರ ಪ್ರಶಸ್ತಿ ಪ್ರಾರಂಭವಾಗಿದ್ದು ಪ್ರಶಸಿ ಪ್ರದಾನ ಸಮಾರಂಭವು ಒರಿಯನ್ ಮಾಲ್‌ನಲ್ಲಿ ಬುಧವಾರದಂದು ನಡೆಯಿತು. ಕನ್ನಡದ್ದೇ ಆದ ಸ್ವಂತ ಪ್ರಶಸ್ತಿ ನೀಡುವ ವೇದಿಕೆ ಇದಾಗಿದ್ದು, ಈ ಮೂಲಕ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ ಬೆನ್ನು ತಟ್ಟುವ ಪ್ರಯತ್ನದ ಭಾಗವಾಗಿ ನಂದಿ ಪ್ರಶಸ್ತಿ ನೀಡುವ ಉದ್ದೇಶ ಹೊಂದಿದೆ. ಕರ್ನಾಟಕ ನಂದಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ ಭಾರತಿ ವಿಷ್ಣುವರ್ಧನ್ ಅವರಿಗೆ ನೀಡಲಾಯಿತು. ಭಾರತಿ ಅವರ ಪರವಾಗಿ ಪ್ರಶಸ್ತಿಯನ್ನು ಅನಿರುದ್ದ […]