ಕರಾರಸಾ ನಿಗಮದಿಂದ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸ್
ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಾತ್ರ ಉಚಿತ ಬಸ್ಸು ಪಾಸುಗಳನ್ನು ಸರ್ಕಾರದ ಇಡಿಸಿಎಸ್ ಇಲಾಖೆಯ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ವಿತರಣೆ ಮಾಡುತ್ತಿದೆ. ಕರ್ನಾಟಕ ರಾಜ್ಯ ನೋಂದಾಯಿತ ಕಾರ್ಮಿಕರು ಯಾವುದೇ ಜಿಲ್ಲೆಯಲ್ಲಿ ನೋಂದಣಿಯಾಗಿದ್ದರೂ ಸಹ ಅವರು ಇಚ್ಚಿಸುವ ಪಾಸಿನಲ್ಲಿ ನಮೂದಿಸಲಾಗುವ ಪ್ರಾರಂಭಿಕ ಸ್ಥಳದಿಂದ 07 ಹಂತಗಳವರೆಗೆ(ಗರಿಷ್ಟ 45 ಕಿ.ಮೀ) […]